ಕನ್ನಡ ಸಾಹಿತ್ಯಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನನ್ಯವಾಗಿದೆ. ಬಾನು ಮುಸ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ಬರುವ ಮೂಲಕ ಕನ್ನಡ ಮಹಿಳಾ ಸಾಹಿತಿಗಳಿಗೆ ವಿಶ್ವ ಮನ್ನಣೆ ದೊರೆಯುವಂತಾಗಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹದೇವ್ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ಜ್ಞಾನಗಂಗಾ ಪ್ರೌಢಶಾಲೆಯಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಎಂದರು.
ಕನ್ನಡ ಸಾಹಿತ್ಯದಲ್ಲಿ ಮೊದಲಿನಿಂದಲೂ ಮಹಿಳಾ ಸಾಹಿತಿಗಳು ಸಾಮಾಜಿಕ ಅಸಮಾನತೆಯ ವಿರುದ್ದ ಧ್ವನಿ ಎತ್ತಿದ್ದಾರೆ. ಅಕ್ಕಮಹಾದೇವಿ, ಸಂಚಿಯ ಹೊನ್ನಮ್ಮ, ನಂಜನಗೂಡು ತಿರುಮಲಾಂಬ, ಎಂ.ಕೆ.ಇಂದಿರಾ, ತ್ರಿವೇಣಿ, ಅನುಪಮ ನಿರಂಜನ ಮುಂತಾದ ಅಸಂಖ್ಯಾತ ಮಹಿಳಾ ಸಾಹಿತಿಗಳು ವಿವಿಧ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ ಎಂದರು.
ಮಹಿಳಾ ಸಾಹಿತಿಗಳು ಸ್ತ್ರೀವಾದಿ ದೃಷ್ಟಿಕೋನದ ಮೂಲಕ ಮಹಿಳೆಯರ ಶೋಷಣೆ, ಸಾಮಾಜಿಕ ಸಮಸ್ಯೆಗಳು, ಆಧ್ಯಾತ್ಮಿಕತೆ, ವೈಯಕ್ತಿಕ ಅನುಭವಗಳು ಮತ್ತು ವೈಚಾರಿಕ ಚಿಂತನೆಗಳನ್ನು ಸಾಹಿತ್ಯದ ಮೂಲಕ ಪರಿಣಾಮಕಾರಿಯಾಗಿ ಕಟ್ಟಿಕೊಟ್ಟಿದ್ದಾರೆ. ಮಹಿಳಾ ಸಾಹಿತ್ಯ ಕ್ಷೇತ್ರ ಇಂದು ವಿಸ್ತಾರಗೊಂಡಿದೆ. ವೈಚಾರಿಕ ಮತ್ತು ವೈವಿಧ್ಯಮಯ ಸಾಹಿತ್ಯ ಓದುಗರನ್ನು ತಲುಪುವ ಮೂಲಕ ಅವರನ್ನು ಚಿಂತನಶೀಲರನ್ನಾಗಿಸಿ ಜಾಗೃತಿಗೊಳಿಸುತ್ತಿರುವುದು ಶ್ಲಾಘನೀಯ ಎಂದರು.
ಪರಿಸರವಾದಿ ವೈ.ಟಿ.ಲೋಹಿತ್ ಮಾತನಾಡಿ, ಇಂದಿನ ಪರಿಸರ ಚೆನ್ನಾಗಿದ್ದಾರೆ ಮಾತ್ರ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಮಾರಕವಾದ ಬೆಳವಣಿಗೆಗಳು ನಡೆಯುತ್ತಿರುವುದು ಆತಂಕಕಾರಿ ವಿಷಯವಾಗಿದೆ. ವಿಜ್ಞಾನ ಮಾನವೀಯ ಮೌಲ್ಯಗಳಿಂದ ವಿಮುಖವಾಗಬಾರದು. ಅಡಿಗೆ ಮನೆಯಲ್ಲಿ ತಯಾರಿಸುವ ಅಡುಗೆಯು ವಿಜ್ಞಾನವೇ ಆಗಿದೆ. ಕನ್ನಡದ ಮಹತ್ವದ ಸಾಹಿತಿ ಪೂರ್ಣ ಚಂದ್ರ ತೇಜಸ್ವಿ ಅವರು ಪರಿಸರ ಸಾಹಿತ್ಯಕ್ಕೆ ಮಹತ್ವದ ಕೃತಿಗಳನ್ನು ನೀಡಿದ್ದಾರೆ. ವಿದ್ಯಾರ್ಥಿಗಳು ಅವರ ಸಾಹಿತ್ಯ ಕೃತಿಗಳನ್ನು ಓದುವ ಮೂಲಕ ಪರಿಸರದ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜ್ಞಾನಗಂಗಾ ಪ್ರೌಢಶಾಲೆಯ ಮುಖ್ಯಶಿಕ್ಷಕರುಗಳಾದ ಎನ್. ರವಿಕುಮಾರ್, ಬಿ.ಕೆ. ಜಗದೀಶ್, ಕನ್ನಡಪರ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಪ್ರೊ.ಕೆ.ಆರ್.ರವಿಕಿರಣ್, , ಎ.ಜಯರಾಮ್, ವಿ.ಎಸ್.ಹೆಗಡೆ, ವೆಂಕಟರಾಜು, ಕೋದಂಡರಾಮ್, ಸಿ.ಅಣ್ಣಯ್ಯ, ನಾಗರತ್ನಮ್ಮ, ಸೂರ್ಯನಾರಾಯಣ್, ಪರಮೇಶ್, ರಾಮಕೃಷ್ಣ, ದರ್ಗಾಜೋಗಿಹಳ್ಳಿ ಮಲ್ಲೇಶ್, ಮುನಿರತ್ನಮ್ಮ, ಸೆಲ್ವರಾಜ್ ಮುಂತಾದವರು ಭಾಗವಹಿಸಿದ್ದರು.
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…