ಕನ್ನಡ ಸಾಹಿತ್ಯಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನನ್ಯ-ಪ್ರಮೀಳಾ ಮಹದೇವ್

ಕನ್ನಡ ಸಾಹಿತ್ಯಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನನ್ಯವಾಗಿದೆ. ಬಾನು ಮುಸ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ಬರುವ ಮೂಲಕ ಕನ್ನಡ ಮಹಿಳಾ ಸಾಹಿತಿಗಳಿಗೆ ವಿಶ್ವ ಮನ್ನಣೆ ದೊರೆಯುವಂತಾಗಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹದೇವ್ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಜ್ಞಾನಗಂಗಾ ಪ್ರೌಢಶಾಲೆಯಲ್ಲಿ   ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಎಂದರು.

ಕನ್ನಡ ಸಾಹಿತ್ಯದಲ್ಲಿ ಮೊದಲಿನಿಂದಲೂ ಮಹಿಳಾ ಸಾಹಿತಿಗಳು ಸಾಮಾಜಿಕ‌ ಅಸಮಾನತೆಯ ವಿರುದ್ದ ಧ್ವನಿ  ಎತ್ತಿದ್ದಾರೆ. ಅಕ್ಕಮಹಾದೇವಿ, ಸಂಚಿಯ ಹೊನ್ನಮ್ಮ, ನಂಜನಗೂಡು ತಿರುಮಲಾಂಬ, ಎಂ.ಕೆ.ಇಂದಿರಾ, ತ್ರಿವೇಣಿ, ಅನುಪಮ ನಿರಂಜನ ಮುಂತಾದ ಅಸಂಖ್ಯಾತ ಮಹಿಳಾ ಸಾಹಿತಿಗಳು ವಿವಿಧ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ ಎಂದರು‌.

ಮಹಿಳಾ ಸಾಹಿತಿಗಳು ಸ್ತ್ರೀವಾದಿ ದೃಷ್ಟಿಕೋನದ ಮೂಲಕ  ಮಹಿಳೆಯರ ಶೋಷಣೆ, ಸಾಮಾಜಿಕ ಸಮಸ್ಯೆಗಳು, ಆಧ್ಯಾತ್ಮಿಕತೆ, ವೈಯಕ್ತಿಕ ಅನುಭವಗಳು ಮತ್ತು ವೈಚಾರಿಕ ಚಿಂತನೆಗಳನ್ನು ಸಾಹಿತ್ಯದ ಮೂಲಕ ಪರಿಣಾಮಕಾರಿಯಾಗಿ ಕಟ್ಟಿಕೊಟ್ಟಿದ್ದಾರೆ. ಮಹಿಳಾ ಸಾಹಿತ್ಯ ಕ್ಷೇತ್ರ ಇಂದು ವಿಸ್ತಾರಗೊಂಡಿದೆ. ವೈಚಾರಿಕ ಮತ್ತು ವೈವಿಧ್ಯಮಯ ಸಾಹಿತ್ಯ ಓದುಗರನ್ನು ತಲುಪುವ ಮೂಲಕ ಅವರನ್ನು ಚಿಂತನಶೀಲರನ್ನಾಗಿಸಿ ಜಾಗೃತಿಗೊಳಿಸುತ್ತಿರುವುದು ಶ್ಲಾಘನೀಯ ಎಂದರು.

ಪರಿಸರವಾದಿ ವೈ.ಟಿ.ಲೋಹಿತ್ ಮಾತನಾಡಿ, ಇಂದಿನ ಪರಿಸರ ಚೆನ್ನಾಗಿದ್ದಾರೆ ಮಾತ್ರ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಮಾರಕವಾದ ಬೆಳವಣಿಗೆಗಳು ನಡೆಯುತ್ತಿರುವುದು ಆತಂಕಕಾರಿ ವಿಷಯವಾಗಿದೆ. ವಿಜ್ಞಾನ ಮಾನವೀಯ ಮೌಲ್ಯಗಳಿಂದ ವಿಮುಖವಾಗಬಾರದು. ಅಡಿಗೆ ಮನೆಯಲ್ಲಿ ತಯಾರಿಸುವ ಅಡುಗೆಯು ವಿಜ್ಞಾನವೇ ಆಗಿದೆ. ಕನ್ನಡದ ಮಹತ್ವದ ಸಾಹಿತಿ ಪೂರ್ಣ ಚಂದ್ರ ತೇಜಸ್ವಿ ಅವರು ಪರಿಸರ ಸಾಹಿತ್ಯಕ್ಕೆ ಮಹತ್ವದ ಕೃತಿಗಳನ್ನು ನೀಡಿದ್ದಾರೆ. ವಿದ್ಯಾರ್ಥಿಗಳು ಅವರ ಸಾಹಿತ್ಯ ಕೃತಿಗಳನ್ನು ಓದುವ ಮೂಲಕ ಪರಿಸರದ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ  ಜ್ಞಾನಗಂಗಾ ಪ್ರೌಢಶಾಲೆಯ ಮುಖ್ಯಶಿಕ್ಷಕರುಗಳಾದ ಎನ್. ರವಿಕುಮಾರ್, ಬಿ.ಕೆ. ಜಗದೀಶ್, ಕನ್ನಡಪರ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಪ್ರೊ.ಕೆ.ಆರ್.ರವಿಕಿರಣ್,   , ಎ.ಜಯರಾಮ್, ವಿ.ಎಸ್.ಹೆಗಡೆ, ವೆಂಕಟರಾಜು,  ಕೋದಂಡರಾಮ್, ಸಿ.ಅಣ್ಣಯ್ಯ, ನಾಗರತ್ನಮ್ಮ,   ಸೂರ್ಯನಾರಾಯಣ್, ಪರಮೇಶ್, ರಾಮಕೃಷ್ಣ,  ದರ್ಗಾಜೋಗಿಹಳ್ಳಿ ಮಲ್ಲೇಶ್, ಮುನಿರತ್ನಮ್ಮ, ಸೆಲ್ವರಾಜ್  ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

3 hours ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

23 hours ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

1 day ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

3 days ago