ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್’ ಕಥಾ ಸಂಕಲನವು ಬೂಕರ್ ಪ್ರಶಸ್ತಿ ಪಡೆದಿದೆ. ಈ ಮೂಲಕ ಕನ್ನಡ ಸಾಹಿತ್ಯಕ್ಕೆ ಮೊದಲ ಬಾರಿಗೆ ಈ ಗೌರವ ಸಂದಿದೆ. ದೀಪಾ ಭಾಸ್ತಿ ಅವರು ಈ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದಿಸಿದ್ದು, ಇದು ಕನ್ನಡಕ್ಕೆ ಸಂದ ಗೌರವ ಎಂದು ಗಣ್ಯರು ಕೊಂಡಾಡಿದ್ದಾರೆ.
ಕನ್ನಡ ಕಸ್ತೂರಿ ಕಂಪು ಅಂತಾರಾಷ್ಟ್ರೀಯ ಮಟ್ಟದಲ್ಲೂ ಪಸರಿಸುವಂತೆ ಕನ್ನಡದ ಸಾಹಿತಿ ಬಾನು ಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಾಸ್ತಿ ಮಾಡಿ, ಲಂಡನ್ ನಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿ ಇದೀಗ ಬೆಂಗಳೂರಿಗೆ ಬಂದಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡದ ಸಂಭ್ರಮವನ್ನು ಲಂಡನ್ ನಲ್ಲಿ ಮುಗಿಸಿಕೊಂಡು ಕನ್ನಡನಾಡಿನಲ್ಲೂ ಸಂಭ್ರಮವನ್ನು ಆಚರಿಸಲು ಇಂದು ಬೆಂಗಳೂರಿಗೆ ಬಂದಿದ್ದೇನೆ. ಲಂಡನ್ ನಲ್ಲಿ ಕನ್ನಡ ವಿರಾಜಮಾನವಾಯ್ತು, ಜಾಗತಿಕ ಮಟ್ಟದಲ್ಲಿ ಕನ್ನಡವನ್ನು ಪ್ರತಿನಿಧಿಸಿದೆವು. ಇದು ನಮಗೆ ವಿಶಿಷ್ಟ ಅನುಭವಾಯಿತು ಎಂದರು
ಕನ್ನಡಿಗರ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಸದಾ ಋಣಿಯಾಗಿರುತ್ತೇನೆ. ನೀವು ತೋರಿಸಿದ ಪ್ರೀತಿ, ಅಭಿಮಾನವು ನನಗೆ ಶಕ್ತಿಯಾಯಿತು. ಕನ್ನಡ ಸಾಹಿತ್ಯ ತಾಯಿ ಬೇರು. ನಾನು ಅದರ ಒಂದು ಟೊಂಗೆ ಅಷ್ಟೆ ಎಂದು ಹೇಳಿದರು.
ಈ ವೇಳೆ ಡೊಳ್ಳು ಹಾಗೂ ಯಕ್ಷಗಾನ ತಂಡಗಳು ಅವರ ಸ್ವಾಗತಕ್ಕೆ ಸಾಕ್ಷಿಯಾದವು.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…