ಕನ್ನಡ ಸಾಹಿತ್ಯ ಮತ್ತು ಸಂಶೋಧನೆಗೆ ನಾಡೋಜ ಕಮಲಾ ಹಂಪನಾ ಕೊಡುಗೆ ಅನನ್ಯವಾಗಿದೆ. ಸ್ತ್ರೀ ಸಂವೇದನೆಗೆ ಸಂಬಂಧಿಸಿದ ಸಂಶೋಧನೆ, ಜೈನ ಸಾಹಿತ್ಯ ಅವರ ವಿಶೇಷ ಅಧ್ಯಯನ ಕ್ಷೇತ್ರವಾಗಿತ್ತು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.
ದೊಡ್ಡಬಳ್ಳಾಪುರ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಸಹಯೋಗದಲ್ಲಿ ನಡೆದ ನಾಡೋಜ ಕಮಲಾ ಹಂಪನಾ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಹಳೆಗನ್ನಡ ಸಾಹಿತ್ಯದ ಸಮಗ್ರ ಅಧ್ಯಯನದಿಂದಾಗಿ ಮಹತ್ವದ ಕನ್ನಡ ಕಾವ್ಯಗಳನ್ನು ಸಂಗ್ರಹಿಸಿ ಕೊಟ್ಟರು. ಸ್ತ್ರೀವಾದಿ ನೆಲೆಯಲ್ಲಿ ವಿಮರ್ಶೆಯೊಂದಿಗೆ, ಮಹಿಳೆಯರನ್ನು ಕುರಿತ ವೈಚಾರಿಕ ಬರಹಗಳೊಂದಿಗೆ ಕನ್ನಡ ಮಹಿಳಾ ಸಾಹಿತ್ಯವನ್ನು ವಿಸ್ತರಿಸಿದರು. ಕಮಲಾಹಂಪನಾ ಅವರ ಕನ್ನಡ ಸಾಹಿತ್ಯ ಸಂಶೋಧನೆ ಮತ್ತು ಚಿಂತನೆಗಳಿಗೆ ಅವರಿಗೆ ಕಲಿಸಿದ ದೊಡ್ಡ ಗುರುಪರಂಪರೆ ಪ್ರೇರಣೆ ಮತ್ತು ಸ್ಫೂರ್ತಿಯಾಗಿತ್ತು ಎಂದರು.
ವಿಶ್ವವಿದ್ಯಾಲಯ ಅಧ್ಯಯನ ಪೀಠಗಳ ಅಧ್ಯಕ್ಷರು ಮತ್ತು ಸಂದರ್ಶಕ ಪ್ರಾಧ್ಯಾಪಕರಾಗಿದ್ದರು. ಕಮಲಾಪ್ರಿಯ ಕಾವ್ಯನಾಮದ ಮೂಲಕ ಹಲವು ಸೃಜನಶೀಲ ಕೃತಿಗಳನ್ನು ಬರೆದ ಕಮಲಾಹಂಪನಾ, ಕನ್ನಡ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃತಿಗಳನ್ನು ರಚನೆ ಮಾಡಿದರು. ಕಥಾಸಂಕಲನಗಳು, ವಚನ ಸಂಕಲನಗಳು, ವಿಮರ್ಶಾ ಕೃತಿಗಳು, ಸಂಶೋಧನಾ ಗ್ರಂಥಗಳು, ಅನುವಾದಗಳು, ನಾಟಕ ರೂಪಕಗಳು, ಕಾದಂಬರಿ ರಚಿಸಿದರು. ಕಮಲಾ ಹಂಪನಾ ಅವರ ಸಾಧನೆಯನ್ನು ಗುರುತಿಸಿ ಹಲವು ಪ್ರಶಸ್ತಿಗಳು ಮತ್ತು ಗೌರವಗಳು ಸಂದಿವೆ. ಮೂಡುಬಿದಿರೆಯಲ್ಲಿ ನಡೆದ 71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು ಎಂದರು.
ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್ ಮಾತನಾಡಿ, ಜೈನಧರ್ಮವು ಪ್ರತಿಪಾದಿಸಿದ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ. ಜೈನ ಧರ್ಮದಲ್ಲಿ ಸತ್ಯ, ನೀತಿ, ಉತ್ತಮ ನಡವಳಿಕೆಗಳಿಗೆ ಹೆಚ್ಚಿನ ಪ್ರಧಾನ್ಯತೆ ಇದೆ. ಕಮಲಾಹಂಪನಾ ಅವರು ಜೈನ ಧರ್ಮ ಮತ್ತು ಸಾಹಿತ್ಯವನ್ನು ಗಂಭೀರವಾಗಿ ಅಧ್ಯಯನ ಮಾಡಿದವರು. ಕಮಲಾ ಹಂಪನಾ ಅವರ ಕನ್ನಡ ಸಾಹಿತ್ಯದ ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು ಕನ್ನಡಿಗರು ಗೌರವಿಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕನ್ನಡಪರ ಹಿರಿಯ ಹೋರಾಟಗಾರರುಗಳಾದ ಸಂಜೀವನಾಯಕ್, ಗುರುರಾಜಪ್ಪ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ, ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಕನ್ನಡ ಜಾಗೃತ ಪರಿಷತ್ತು ಗೌರವ ಅಧ್ಯಕ್ಷೆ ಸುಲೋಚನಮ್ಮ ವೆಂಕಟರೆಡ್ಡಿ, ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕನ್ನಡ ಪಕ್ಷದ ಅಧ್ಯಕ್ಷ ಡಿ.ವೆಂಕಟೇಶ್, ಕಾರ್ಯದರ್ಶಿ ಎಚ್.ಮುನಿಪಾಪಣ್ಣ, ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕವಿ ಶ್ರೀನಿವಾಸ ವಾಣಿಗಾರಹಳ್ಳಿ, ಕನ್ನಡ ಜಾಗೃತ ಪರಿಷತ್ತು ಮತ್ತು ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…