Categories: Home

ಕನ್ನಡ ಸಾಹಿತ್ಯ ಮತ್ತು ಸಂಶೋಧನೆಗೆ ನಾಡೋಜ ಕಮಲಾ ಹಂಪನಾ ಕೊಡುಗೆ ಅನನ್ಯ-ದೊಡ್ಡಬಳ್ಳಾಪುರ ತಾಲ್ಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು

ಕನ್ನಡ ಸಾಹಿತ್ಯ ಮತ್ತು ಸಂಶೋಧನೆಗೆ ನಾಡೋಜ ಕಮಲಾ ಹಂಪನಾ ಕೊಡುಗೆ ಅನನ್ಯವಾಗಿದೆ. ಸ್ತ್ರೀ ಸಂವೇದನೆಗೆ ಸಂಬಂಧಿಸಿದ ಸಂಶೋಧನೆ, ಜೈನ ಸಾಹಿತ್ಯ ಅವರ ವಿಶೇಷ ಅಧ್ಯಯನ ಕ್ಷೇತ್ರವಾಗಿತ್ತು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ದೊಡ್ಡಬಳ್ಳಾಪುರ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಸಹಯೋಗದಲ್ಲಿ ನಡೆದ ನಾಡೋಜ ಕಮಲಾ ಹಂಪನಾ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಹಳೆಗನ್ನಡ ಸಾಹಿತ್ಯದ ಸಮಗ್ರ ಅಧ್ಯಯನದಿಂದಾಗಿ  ಮಹತ್ವದ ಕನ್ನಡ ಕಾವ್ಯಗಳನ್ನು ಸಂಗ್ರಹಿಸಿ ಕೊಟ್ಟರು. ಸ್ತ್ರೀವಾದಿ ನೆಲೆಯಲ್ಲಿ ವಿಮರ್ಶೆಯೊಂದಿಗೆ,  ಮಹಿಳೆಯರನ್ನು ಕುರಿತ ವೈಚಾರಿಕ ಬರಹಗಳೊಂದಿಗೆ ಕನ್ನಡ ಮಹಿಳಾ ಸಾಹಿತ್ಯವನ್ನು ವಿಸ್ತರಿಸಿದರು. ಕಮಲಾಹಂಪನಾ ಅವರ ಕನ್ನಡ ಸಾಹಿತ್ಯ ಸಂಶೋಧನೆ ಮತ್ತು ಚಿಂತನೆಗಳಿಗೆ ಅವರಿಗೆ ಕಲಿಸಿದ ದೊಡ್ಡ ಗುರುಪರಂಪರೆ ಪ್ರೇರಣೆ ಮತ್ತು ಸ್ಫೂರ್ತಿಯಾಗಿತ್ತು ಎಂದರು.

ವಿಶ್ವವಿದ್ಯಾಲಯ ಅಧ್ಯಯನ ಪೀಠಗಳ ಅಧ್ಯಕ್ಷರು ಮತ್ತು ಸಂದರ್ಶಕ ಪ್ರಾಧ್ಯಾಪಕರಾಗಿದ್ದರು. ಕಮಲಾಪ್ರಿಯ ಕಾವ್ಯನಾಮದ ಮೂಲಕ ಹಲವು ಸೃಜನಶೀಲ ಕೃತಿಗಳನ್ನು ಬರೆದ ಕಮಲಾಹಂಪನಾ, ಕನ್ನಡ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃತಿಗಳನ್ನು‌ ರಚನೆ ಮಾಡಿದರು.  ಕಥಾಸಂಕಲನಗಳು, ವಚನ ಸಂಕಲನಗಳು, ವಿಮರ್ಶಾ ಕೃತಿಗಳು, ಸಂಶೋಧನಾ ಗ್ರಂಥಗಳು, ಅನುವಾದಗಳು, ನಾಟಕ ರೂಪಕಗಳು, ಕಾದಂಬರಿ ರಚಿಸಿದರು. ‌ಕಮಲಾ ಹಂಪನಾ ಅವರ ಸಾಧನೆಯನ್ನು ಗುರುತಿಸಿ ಹಲವು ಪ್ರಶಸ್ತಿಗಳು ಮತ್ತು ಗೌರವಗಳು ಸಂದಿವೆ. ಮೂಡುಬಿದಿರೆಯಲ್ಲಿ ನಡೆದ 71ನೇ ಅಖಿಲ‌ ಭಾರತ ‌ಕನ್ನಡ ಸಾಹಿತ್ಯ ಸಮ್ಮೇಳನದ ‌ಅಧ್ಯಕ್ಷರಾಗಿದ್ದರು ಎಂದರು.

ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್ ಮಾತನಾಡಿ, ಜೈನಧರ್ಮವು ಪ್ರತಿಪಾದಿಸಿದ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ. ಜೈನ ಧರ್ಮದಲ್ಲಿ ಸತ್ಯ, ನೀತಿ, ಉತ್ತಮ ನಡವಳಿಕೆಗಳಿಗೆ ಹೆಚ್ಚಿನ ಪ್ರಧಾನ್ಯತೆ ಇದೆ. ಕಮಲಾಹಂಪನಾ ಅವರು ಜೈನ ಧರ್ಮ ಮತ್ತು  ಸಾಹಿತ್ಯವನ್ನು ಗಂಭೀರವಾಗಿ ಅಧ್ಯಯನ ಮಾಡಿದವರು.‌  ಕಮಲಾ ಹಂಪನಾ ಅವರ ಕನ್ನಡ ಸಾಹಿತ್ಯದ   ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು  ಕನ್ನಡಿಗರು ಗೌರವಿಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡಪರ ಹಿರಿಯ ಹೋರಾಟಗಾರರುಗಳಾದ ಸಂಜೀವನಾಯಕ್, ಗುರುರಾಜಪ್ಪ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ, ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಕನ್ನಡ ಜಾಗೃತ ಪರಿಷತ್ತು ಗೌರವ ಅಧ್ಯಕ್ಷೆ ಸುಲೋಚನಮ್ಮ ವೆಂಕಟರೆಡ್ಡಿ, ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕನ್ನಡ ಪಕ್ಷದ ಅಧ್ಯಕ್ಷ ಡಿ.ವೆಂಕಟೇಶ್, ಕಾರ್ಯದರ್ಶಿ ಎಚ್.ಮುನಿಪಾಪಣ್ಣ, ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕವಿ ಶ್ರೀನಿವಾಸ ವಾಣಿಗಾರಹಳ್ಳಿ, ಕನ್ನಡ ಜಾಗೃತ ಪರಿಷತ್ತು ಮತ್ತು  ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

7 hours ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

18 hours ago

ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…

19 hours ago

ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಸ್ಥಳಗಳಿಗೆ ಸಿಇಒ ದಿಢೀರ್ ಭೇಟಿ: ಸ್ಥಳದಲ್ಲೇ ಕ್ಯಾಟ್ ಫಿಶ್, ಹೊಂಡಗಳ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಕ್ಯಾಟ್‌ ಫಿಶ್‌ ಸಾಕಣೆ ಮಾಡುತ್ತಿದ್ದ ಹೊಂಡಗಳ…

20 hours ago

ಗೋಮಾಳ ಭೂಮಿಯಲ್ಲಿನ ರೈತರನ್ನು ಒಕ್ಕಲೆಬ್ಬಿಸದಂತೆ ಜಿಲ್ಲಾಧಿಕಾರಿಗೆ ಮನವಿ

ಕೋಲಾರ: ಮೈಸೂರು ಮಹಾರಾಜರ ಕಾಲದಿಂದಲೂ ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ರೈತರಿಗೆ ಹಂಚಿಕೆಯಾಗಿರುವ ಸರ್ಕಾರಿ ಗೋಮಾಳ ಹಾಗೂ ಕಂದಾಯ ಭೂಮಿಯಲ್ಲಿನ ರೈತರನ್ನು…

23 hours ago

ವೈಯಕ್ತಿಕ ವಿಚಾರಕ್ಕೆ ಸಿಎಂ ಭೇಟಿ; ತಾಲೂಕಿನ ಹಿತರಕ್ಷಣೆಗಲ್ಲ? ವೆಂಕಟರಮಣಯ್ಯ ವಿರುದ್ಧ ಕಾಡನೂರು ಗ್ರಾ.ಪಂ ಮಾಜಿ ಅಧ್ಯಕ್ಷ ಮನು ಎನ್ ಆರ್ ಆರೋಪ

ದೊಡ್ಡಬಳ್ಳಾಪುರ: ಅಳಿಯನ ವರ್ಗಾವಣೆ ಸೇರಿದಂತೆ ವೈಯಕ್ತಿಕ ವಿಚಾರಗಳಿಗಾಗಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು…

1 day ago