ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ (85) ಅವರು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ.
ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆ, ಲೀಲಾವತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಎಂದು ಲೋ ಬಿಪಿ ಸಮಸ್ಯೆ ಶುರುವಾಗಿತ್ತು. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಲೀಲಾವತಿ ನಿಧನರಾಗಿದ್ದಾರೆ ಎನ್ನಲಾಗಿದೆ.
ವೈಯಕ್ತಿಕ ಜೀವನ
ಲೀಲಾ ಕಿರಣ್ ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ. ನಾಟಕ, ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದ ಲೀಲಾ ಅವರು ವೃತ್ತಿಜೀವನ ಆರಂಭಿಸಿದ್ದು ಮೈಸೂರಿನಲ್ಲಿ. ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸವನ್ನೂ ಅವರು ನಿರ್ವಹಿಸಿದ್ದರು.
ಚಿತ್ರ ಜೀವನ
ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು.
ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ನಾಯಕನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.
ಪ್ರಶಸ್ತಿ-ಪುರಸ್ಕಾರಗಳು
2008 – ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
2006- ಅತ್ತ್ಯುತ್ತಮ ಪೋಷಕನಟಿ ಫಿಲಂಫೇರ್ ಕನ್ನಡ – ಕನ್ನಡದ ಕಂದ
1999-2000 – ಡಾ. ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ
ಅತ್ತ್ಯುತ್ತಮ ಪೋಷಕನಟಿ ಪ್ರಶಸ್ತಿ
1960-70-ಗೆಜ್ಜೆಪೂಜೆ
1971-72-ಸಿಪಾಯಿ ರಾಮು
1989-90- ಡಾಕ್ಟರ್ ಕೃಷ್ಣ
ಸಮಾಜಸೇವೆ
ಮದುವೆ ಮಾಡಿ ನೋಡು ಹಾಗೂ ಸಂತ ತುಕಾರಾಂ ಚಿತ್ರಗಳಲ್ಲಿನ ಅಭಿನಯಕ್ಕೆ ಲೀಲಾವತಿ ಅವರಿಗೆ ರಾಷ್ಟ್ರ ಪ್ರಶಸ್ತಿಗಳು ಲಭಿಸಿವೆ.
ನೆಲಮಂಗಲದ ಸುತ್ತಮುತ್ತ ವಾಸಿಸುವ ಜನರ ಆರೋಗ್ಯ ಸೇವೆಗಾಗಿ ಸೋಲದೇವನಹಳ್ಳಿಯಲ್ಲಿ ಆಸ್ಪತ್ರೆಯೊಂದನ್ನು ಲೀಲಾವತಿ ಕಟ್ಟಿಸಿದ್ದಾರೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…