ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.
ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ ಅಭಿಮಾನ ಮೂಡಲಿ ಎಂದು ಹೇಳಿದರು.
ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್ ಮತ್ತು ಸಾ.ರಾ
ಗೋವಿಂದು ಅವರ ಬೇಡಿಕೆಗೆ ವಿಚಾರವಾಗಿ ಸಿಂಡಿಕೇಟ್ ಸದಸ್ಯರ ಜೊತೆ ಚರ್ಚಿಸಲಾಗುವುದು. ಇಲ್ಲಿಯವರೆಗೂ ಅರಸು ಅವರಿಗೆ ಡಾಕ್ಟರೇಟ್ ಏಕೆ ಕೊಟ್ಟಿಲ್ಲ ಎಂದು ಶಾಕ್ ಆಗಿದೆ. ಈ ಬಗ್ಗೆ ಗಮನ ಹರಿಸ್ತೀನಿ ಎಂದು ತಿಳಿಸಿದರು.
ಮೈಸೂರು ವಿವಿಯಲ್ಲಿ ನನಗೆ ಹಿಂದೆಯೇ ಡಾಕ್ಟರೇಟ್ ಕೊಡ್ತೀವಿ ಎಂದಿದ್ದರು. ಆದರೆ ನಾನು ಪಡೆಯಲಿಲ್ಲ. ಬೇಡ ಅಂದೆ. ಓದಿ, ಜ್ಞಾನ ವಿಸ್ತಾರ ಮಾಡಿಕೊಂಡು ಡಾಕ್ಟರೇಟ್ ಪಡೆಯಬೇಕು ಎನ್ನುವುದು ನನ್ನ ವೈಯುಕ್ತಿಕ ಭಾವನೆ ಎಂದರು.
ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ. ಆದರೆ ದ್ವಿಭಾಷಾ ನೀತಿಯಾಗಿ ಕಾನೂನು ಜಾರಿ ಆಗಬೇಕಾದರೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕಾಗುತ್ತದೆ ಎಂದು ಹೇಳಿದರು.
MES ನವರೂ ಕನ್ನಡಿಗರೇ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಅದನ್ನು ಮಟ್ಟಹಾಕ್ತೀವಿ. ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಇರುವುದನ್ನೆಲ್ಲಾ ಮಾಡಲು ಸರ್ಕಾರ ಸಿದ್ದವಿದೆ ಎಂದರು.
ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ. ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ ಎಂದು ಹೇಳಿದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…