ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್ ಕಂಪನಿಯ ಘಟಕದ ಮುಖ್ಯಸ್ಥ ನವೀದ್ ಹೇಳಿದರು.
ತಾಲೂಕಿನ ಕಮಲೂರು ಕೆರೆಯನ್ನು ಫಾಕ್ಸ್ಕಾನ್ ಕಂಪನಿಯ ಸಿಎಸ್‌ಆರ್ ಅನುದಾನದಲ್ಲಿ ಪುನಶ್ಚೇತನಗೊಳಿಸಿ, ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೆರೆಯ ಅಭಿವೃದ್ಧಿಗೆ ಅವಕಾಶ ದೊರೆತಿರುವುದು ಸಂತಸದ ಸಂಗತಿ. ಕೆರೆಗಳ ಅಭಿವೃದ್ಧಿಯಿಂದ ನೀರಿನ ಸಂಗ್ರಹಣೆ ಹೆಚ್ಚುವುದರ ಜೊತೆಗೆ ಅಂತರ್ಜಲ ಮಟ್ಟವೂ ಏರಿಕೆಯಾಗುತ್ತದೆ. ಜೀವ ವೈವಿಧ್ಯತೆ ಸಂರಕ್ಷಣೆ, ಮಳೆನೀರು ಸಂಗ್ರಹಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ಕೆರೆಗಳು ಮಹತ್ವದ ಪಾತ್ರವಹಿಸುತ್ತವೆ. ಕೈಗಾರಿಕಾ ಅಭಿವೃದ್ಧಿಯ ಜೊತೆಗೆ ಗ್ರಾಮಗಳ ಅಭಿವೃದ್ಧಿಗೂ ಫಾಕ್ಸ್ಕಾನ್ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.
ತಿಪ್ಪೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಮಾತನಾಡಿ, ಬಯಲುಸೀಮೆ ಪ್ರದೇಶಗಳಲ್ಲಿ ಕೆರೆಗಳ ಮಹತ್ವ ಇನ್ನಷ್ಟು ಹೆಚ್ಚಾಗಿದೆ. ಫಾಕ್ಸ್ಕಾನ್ ಕಂಪನಿಯ ಸಿಎಸ್‌ಆರ್ ಅನುದಾನದಲ್ಲಿ ಕಮಲೂರು ಕೆರೆಗೆ ಹೊಸ ರೂಪ ಸಿಕ್ಕಿದ್ದು, ಹೂಳೆತ್ತುವಿಕೆ, ಕೆರೆ ಕಟ್ಟೆ ಅಭಿವೃದ್ಧಿ, ಕೆರೆ ಬದಿಗಳಲ್ಲಿ ಸಸಿ ನೆಡುವುದು ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇಂತಹ ಯೋಜನೆಗಳು ಇನ್ನಷ್ಟು ಕೆರೆಗಳಿಗೆ ವಿಸ್ತರಿಸಿದರೆ ಗ್ರಾಮಗಳ ನೀರಿನ ಸಮಸ್ಯೆ ನಿವಾರಣೆಗೆ ನೆರವಾಗಲಿದೆ ಎಂದರು.
ಕಾರ್ಯಕ್ರಮದ ಅಂಗವಾಗಿ ಕಮಲೂರು ಕೆರೆ ಬದಿಗಳಲ್ಲಿ ಹಣ್ಣಿನ ಸಸಿಗಳನ್ನು ನೆಡಲಾಯಿತು. ಬಳಿಕ ಫಾಕ್ಸ್ಕಾನ್ ಕಂಪನಿಯ ಅಧಿಕಾರಿಗಳು ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಫಾಕ್ಸ್ಕಾನ್ ಕಂಪನಿಯ ವ್ಯವಸ್ಥಾಪಕ ಸುಬ್ರಮಣಿ, ಅಧಿಕಾರಿಗಳಾದ ಪರ್ಲ್, ಆ್ಯಂಡ್ರಿವ್, ಕೃಷ್ಣ ಪ್ರಸಾದ್, ಶಿವಣ್ಣ ಹಾಗೂ ಮುಖಂಡರಾದ ಪ್ರಸಾದ್, ಮಹೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಗೆ ಸರ್ಕಾರ ಅ.20ರವರೆಗೆ ಗಡುವು ವಿಸ್ತರಿಸಿದ್ದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ ಶೇ.26.65ರಷ್ಟು…
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…