ಕಮಲ ಕೆಸರಿನಲ್ಲಿ ಇದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಈ “ಕೈ” ಅಧಿಕಾರದಲ್ಲಿದ್ದರೆ ಚೆಂದ- ಡಿಸಿಎಂ ಡಿಕೆಶಿ

ನಮ್ಮದು ಬಲಿಷ್ಠವಾದ ಸರ್ಕಾರ. ನಿಮ್ಮ ಋಣವನ್ನು ತೀರಿಸುವ ಕೆಲಸ ಮಾಡಲು ಯತ್ನಸುತ್ತೇವೆ. ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತನ್ನು ಈಡೇರಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಶೇ.90ರಷ್ಟು ಜನರಿಗೆ ಮನೆಗೆ ದೀಪ‌, ಹಸಿದವರಿಗೆ ಅಕ್ಕಿ, ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಕ್ತಿ ಯೋಜನೆ ಸೇರಿದಂತೆ ಐದು ಗ್ಯಾರೆಂಟಿ ಯೋಜನೆಗಳನ್ನು ತಂದು ಯಶಸ್ವಿಯಾಗಿದ್ದೇವೆ.

ವಿರೋಧ ಪಕ್ಷದವರು ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ಯಾರಿಗಾಗಿ, ಯಾತಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದರೆ ಎಂಬುದು ಗೊತ್ತಿಲ್ಲ. ರೈತರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಆಕ್ರೋಶವಂತೆ ಆಕ್ರೋಶ ಯಾರ ಮೇಲೆ ಆಕ್ರೋಶ, ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿ ಎಂದು ಬಿಜೆಪಿ ವಿರುದ್ಧ ಹರಿಹಾದ್ದರು.

ಜನಸೇವೆಯಲ್ಲಿ ಪ್ರಾಮಾಣಿಕತೆ ಇರಲಿ. ಕಾಂಗ್ರೆಸ್ ಅಧಿಕಾರ ಬಂದಕೂಡಲೇ ಎಲ್ಲರಿಗೂ ಅಧಿಕಾರ ಕೊಡುತ್ತೇವೆ. ಉಚಿತ ಶಿಕ್ಷಣ, ಪೋಡಿ ಮುಕ್ತ ಗ್ರಾಮ, ಉಚಿತ ಪಹಣಿ‌ ಕೊಡುವುದು ಸೇರಿದಂತೆ ಇನ್ನಿತರೆ ಜನ‌ಸ್ನೇಹಿ ಕಾರ್ಯಕ್ರಮಗಳನ್ನು ತಂದಿದ್ದೇವೆ. ಇಂತಹದ್ದೊಂದು ಯೋಜನೆ, ಸೌಲಭ್ಯ ಬಿಜೆಪಿ ಸರ್ಕಾರವಿದ್ದಾಗ ತಂದಿದೆಯೇ..? ಎಂದು ಪ್ರಶ್ನೆ ಮಾಡಿದರು.

ಬಿಜೆಪಿ,‌ ಜೆಡಿಎಸ್ ನವರೇ ಬಡವರು, ರೈತರಿಗೆ, ಮಹಿಳೆಯರಿಗೆ, ನಿರುದ್ಯೋಗಸ್ಥರಿಗೆ ಏನು‌ ಮಾಡಿದ್ದೀರಿ…? ಕಮಲ ಕೆಸರಿನಲ್ಲಿ ಇದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಈ “ಕೈ” ಅಧಿಕಾರದಲ್ಲಿದ್ದರೆ ಚೆಂದ ಎಂದರು.

Ramesh Babu

Journalist

Recent Posts

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

10 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

11 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

23 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

23 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

24 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

1 day ago