ಕನ್ನಡ, ನಾಡು, ನುಡಿಯನ್ನು ಉಳಿಸಿ ಬೆಳೆಸಲು ಹಾಗೂ ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡಲು ನನಗೆ ಅವಕಾಶ ಮಾಡಿಕೊಟ್ಟ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರಿಗೆ ತುಂಬು ಹೃದಯ ಧನ್ಯವಾದಗಳು. ತಾಲೂಕಿನಲ್ಲಿ ಕರವೇ ನಾರಾಯಣಗೌಡ ಬಣವನ್ನು ಇನ್ನಷ್ಟು ಬಲಗೊಳಿಸುತ್ತೇನೆ ಎಂದು ನೂತನ ತಾಲೂಕು ಅಧ್ಯಕ್ಷ ಬೈರಾಪುರ ಮಂಜುನಾಥ್ ಅವರು ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕರವೇ(ನಾರಾಯಣಗೌಡ ಬಣ) ಜಿಲ್ಲಾಧ್ಯಕ್ಷ ಪುರುಷೋತ್ತ ಅವರ ನೇತೃತ್ವದಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕನ್ನಡ ಎಂದರೆ ಕೇವಲ ಭಾಷೆ ಮಾತ್ರವಲ್ಲ. ಕನ್ನಡ ಎಂದರೆ ನಮ್ಮ ಉಸಿರು, ರಾಜ್ಯದ ಸಂಸ್ಕೃತಿ, ಪರಿಸರ, ಆಹಾರ, ಉಡುಗೆ ತೊಡುಗೆ ಬಿಂಬಿಸುವ ಪದ್ಧತಿಯಾಗಿದೆ ಎಂದರು.
ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಸಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಒಂದು ವೇಳೆ ಸರ್ಕಾರದ ಆದೇಶವನ್ನು ನಿರ್ಲಕ್ಷ್ಯ ಮಾಡಿದರೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ಮಾಡಿ ಕನ್ನಡ ಬಳಕೆಗೆ ಒತ್ತು ನೀಡುವಂತೆ ಮನವರಿಕೆ ಮಾಡಲಾಗುವುದು ಎಂದರು.
ನಂತರ ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ ಗೌಡ ಮಾತನಾಡಿ, ದೊಡ್ಡಬಳ್ಳಾಪುರ ತಾಲೂಕು ಕರವೇ ನೂತನ ಅಧ್ಯಕ್ಷರಾಗಿ ಆಯ್ಕೆಯಾದಂತಹ ಮಂಜುನಾಥ್ ಅವರಿಗೆ ಅಭಿನಂದನೆ. ಕರುನಾಡಲ್ಲಿ ಕನ್ನಡವನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಬೇಕು. ಕನ್ನಡತನಕ್ಕೆ ಧಕ್ಕೆ ಉಂಟಾಗದಂತೆ ನೋಡಿಕೊಳ್ಳಬೇಕು. ಜನರಲ್ಲಿ ಕನ್ನಡಾಭಿಮಾನ ಬೆಳೆಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲು ಉದ್ಯೋಗವಕಾಶ ಸಿಗಬೇಕು. ಕನ್ನಡಿಗರಿಗೆ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಕಡ್ಡಾಯ ಮಾಡಬೇಕು. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಈ ವೇಳೆ ಜೆಜೆ ಫೌಂಡೇಶನ್ ನ ಜೈಕುಮಾರ್, ಕರವೇ ಮುಖಂಡರು, ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…