ಡಿ.27ರಂದು ಕನ್ನಡದ ನಾಮಫಲಕದ ಅಭಿಯಾನದ ವೇಳೆ, ಇಂಗ್ಲಿಷ್ ಹಾಗೂ ಹಿಂದಿ ನಾಮಫಲಕಗಳನ್ನು ತೆಗೆದು ಎಸೆಯುವ ಮೂಲಕ ಕನ್ನಡ ಜಾಗೃತಿ ಮೂಡಿಸುವ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನೀಯ. ಕೂಡಲೇ ಬಂಧನಕ್ಕೆ ಒಳಗಾದವರನ್ನ ಬಿಡುಗಡೆ ಮಾಡಬೇಕು ಎಂದು ಕರವೇ ತಾಲೂಕು ಅಧ್ಯಕ್ಷ ಪುರುಷೋತ್ತಮ ಗೌಡ ಒತ್ತಾಯಿಸಿದರು.
ನಾರಾಯಣಗೌಡ ಅವರ ಆದೇಶದಂತೆ, ರಾಜ್ಯ ಉಪಾಧ್ಯಕ್ಷರಾದ ಪುಟ್ಟೇಗೌಡ, ರಾಜ್ಯ ಮಹಿಳಾ ಘಟಕ ಉಪಾಧ್ಯಕ್ಷರಾದ ಅನುಪೂರ್ಣ ಅವರ ಮಾರ್ಗದರ್ಶನದಂತೆ ಕಡ್ಡಾಯ ಕನ್ನಡ ನಾಮಫಲಕ ಹಾಕುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡರನ್ನ ಬಂಧಿಸಿರುವುದಕ್ಕೆ ಕರವೇ ಕಾರ್ಯಕರ್ತರು ಖಂಡಿಸಿ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕೂಡಲೇ ಬಂಧನದಿಂದ ಬಿಡುಗಡೆಗೊಳಿಸುವಂತೆ ಆಗ್ರಹಿಸಿದರು. ಈ ವೇಳೆ ಅವರು ಮಾತನಾಡಿದರು.
ಒಂದು ವೇಳೆ ಬಿಡುಗಡೆ ಮಾಡದಿದ್ದರೆ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.
ಕನ್ನಡ ಭಾಷೆಯನ್ನ ಉಳಿಸಿ ಬೆಳೆಸಲು ನಿರಂತರವಾಗಿ ಹೋರಾಟ ಮಾಡುತ್ತೇವೆ. ನಮ್ಮ ಹೋರಾಟವನ್ನ ಹತ್ತಿಕ್ಕುವ ಕೆಲಸ ಸರ್ಕಾರ ಮಾಡಬಾರದು. ಕನ್ನಡ ನೆಲ, ಜಲ, ಭಾಷೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ಈ ವೇಳೆ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…