ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಪುಟ್ಟೇಗೌಡರು ಸಣ್ಣೀರಪ್ಪ, ಕಾರ್ಯಕರ್ತರನ್ನು ಬಂಧನದಿಂದ ಬಿಡುಗಡೆ ಮಾಡುವಂತೆ ಕರವೇ ಮುಖಂಡರು ಶ್ರೀ ಘಾಟಿ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಡಿ.27ರಂದು ಕನ್ನಡದ ನಾಮಫಲಕದ ಅಭಿಯಾನದ ವೇಳೆ, ಇಂಗ್ಲಿಷ್ ಹಾಗೂ ಹಿಂದಿ ನಾಮಫಲಕಗಳನ್ನು ತೆಗೆದು ಎಸೆಯುವ ಮೂಲಕ ಕನ್ನಡ ಜಾಗೃತಿ ಮೂಡಿಸುವ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಕಾರ್ಯಕರ್ತರನ್ನು ಬಂಧನ ಮಾಡಲಾಗಿತ್ತು.
ಕೂಡಲೇ ರಾಜ್ಯ ಸರ್ಕಾರ ಬಂಧನಕ್ಕೆ ಒಳಗಾದವರನ್ನ ಬಿಡುಗಡೆ ಮಾಡಬೇಕು ಎಂದು ಕರವೇ ರಾಜ್ಯ ಮಹಿಳಾ ಉಪಾಧ್ಯಕ್ಷರಾದ ಅನ್ನಪೂರ್ಣ, ತಾಲೂಕು ಕರವೇ ಅಧ್ಯಕ್ಷ ಪುರುಷೋತ್ತಮ ಗೌಡ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷವಾಗಿ ಅರ್ಚನೆ ಮಾಡಿ ಪೂಜೆಯನ್ನು ಸಲ್ಲಿಸಲಾಯಿತು.
ಈ ವೇಳೆ ಶ್ರೀನಾಥ್, ಮೆಹಬೂಬ್, ಸಂಜೀವ್ ನಾಯಕ್, ಶೋಭಾ, ಗಂಗಾ, ಗೀತಾ, ಭಾಗ್ಯಮ್ಮ ಸೇರಿದಂತೆ ಕರವೇ ಕಾರ್ಯಕರ್ತರು ಭಾಗಿಯಾಗಿದ್ದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…