ಕರುಣಾನಿಧಿ ಪುತ್ರ ಎಂ.ಕೆ ಅಳಗಿರಿ ಆಪ್ತನ ಮೇಲೆ ಡೆಡ್ಲಿ ಅಟ್ಯಾಕ್

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಪುತ್ರ ಎಂ.ಕೆ ಅಳಗಿರಿ ಆಪ್ತರಾಗಿದ್ದ ವಿ.ಕೆ.ಗುರುಸ್ವಾಮಿ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಾಣಸವಾಡಿಯ ಕಮ್ಮನಹಳ್ಳಿ ಸುಖಸಾಗರ್ ಹೋಟೆಲ್​ನಲ್ಲಿ ಟೀ ಕುಡಿಯುವಾಗ ನಡೆದಿದೆ.

ಗುರುಸ್ವಾಮಿ ತಲೆ ಭಾಗಕ್ಕೆ ಲಾಂಗ್ ನಿಂದ ಹಲ್ಲೆ ನಡೆಸಲಾಗಿದೆ. ತೀವ್ರವಾಗಿ ಪೆಟ್ಟಾಗಿದ್ದರಿಂದ ಚಿಕಿತ್ಸೆಗಾಗಿ ಗುರುಸ್ವಾಮಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳುನಾಡಿನಿಂದ ಕಾರಿನಲ್ಲೇ ಫಾಲೋ ಮಾಡಿಕೊಂಡು ಬಂದಿದ್ದ ಐವರು ಹಂತಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ವಿ.ಕೆ ಗುರುಸ್ವಾಮಿ ಮಧುರೈ ಮೂಲದವರು. ಮಧುರೈ ಕಾರ್ಪೊರೇಷನ್‌ ಮಾಜಿ ಅಧ್ಯಕ್ಷ ಆಗಿದ್ದರು. ಕೊಲೆ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿರುವ ವಿವಿಧ ಪ್ರಕರಣಗಳಲ್ಲಿ ಗುರುಸ್ವಾಮಿ ಆರೋಪಿ. ತಮಿಳುನಾಡಿನ ನಟೋರಿಯಸ್​ ರೌಡಿ ಕೂಡ ಆಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಲಿಟಿಗೇಷನ್ ಇರೋ ಸೈಟ್ ವಿಚಾರವಾಗಿ ಮಾತುಕತೆಗೆ ಬೆಂಗಳೂರಿಗೆ ಬಂದಿದ್ದ ಗುರುಸ್ವಾಮಿ. ಹೋಟೆಲ್​ವೊಂದರಲ್ಲಿ ರೂಂ ಮಾಡಿಕೊಂಡು ಇದ್ದು, ಇಡೀ ದಿನ ಮನೆಯೊಂದು ಹುಡುಕಿ ಸೈಟ್​ ಬಗ್ಗೆ ಗುರುಸ್ವಾಮಿ ಮಾತಾಡುತ್ತಿದ್ದರು ಎನ್ನಲಾಗಿದೆ.

ಈ ಕುರಿತು ಬ್ರೋಕರ್​ ಜತೆ ಮಾತಾಡುವಾಗ ತಮಿಳುನಾಡು ರಿಜಿಸ್ಟ್ರೇಷನ್​ ಕಾರಿನಲ್ಲಿ ಬಂದು ಏಕಾಏಕಿ ಅಟ್ಯಾಕ್​ ಮಾಡಿದ್ದಾರೆ. ಸದ್ಯ ಸ್ಥಳಕ್ಕೆ ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

4 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

8 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

9 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

10 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

12 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

15 hours ago