ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ರೈಲ್ವೆ ನಿಲ್ದಾಣದ ಬಳಿ ಮೇ 31, 2025ರಂದು ನಡೆದ ಒಂದು ಕರುಳು ಹಿಂಡುವ ಘಟನೆಯಲ್ಲಿ, 30 ವರ್ಷದ ಮಾನಸಿಕ ಅಸ್ವಸ್ಥಳಾದ ತುಂಬು ಗರ್ಭಿಣಿ ರೇಣುಕಾ… ಬೀದಿಯಲ್ಲಿ ಶವವಾಗಿ ಕಂಡುಬಂದಿದ್ದಾಳೆ.
ಜಂಗಮಕೋಟೆ ಮೂಲದ ಮಾನಸಿಕ ಅಸ್ವಸ್ಥಳಾದ ಈ ಮಹಿಳೆ, ದಿಕ್ಕು ದೆಸೆಯಿಲ್ಲದೆ ಬೀದಿಗಳಲ್ಲಿ ಅಲೆದಾಡುತ್ತಿದ್ದವಳು.
ಆಕೆಯನ್ನು ಯಾರೋ ದುಷ್ಕರ್ಮಿಗಳು ದೈಹಿಕವಾಗಿ ದುರ್ಬಳಕೆ ಮಾಡಿ ಗರ್ಭಿಣಿಯನ್ನಾಗಿ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ…
8 ತಿಂಗಳ ಗರ್ಭಿಣಿಯಾಗಿದ್ದ ಆಕೆ, ರೈಲ್ವೆ ನಿಲ್ದಾಣದ ಬಳಿ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿದ್ದಾಳೆ. ಈ ಘಟನೆಯು ಸಮಾಜದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ದಿಕ್ಕಿಲ್ಲದವರಿಗೆ ಸೂಕ್ತ ರಕ್ಷಣೆಯ ಕೊರತೆಯನ್ನು ಎತ್ತಿ ತೋರಿಸಿದೆ. ರೇಣುಕಾಳ ದಾರುಣ ಅಂತ್ಯವು ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ.
ಈ ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯ ಪಿಎಸ್‌ಐ ವೇಣುಗೋಪಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ತವ್ಯದ ಜೊತೆಗೆ, ಅವರು ರೇಣುಕಾಳ ಶವವನ್ನು ಸಂಸ್ಕಾರಕ್ಕೆ ಒಯ್ಯಲು ಆರ್ಥಿಕ ಸಹಾಯವನ್ನು ಒದಗಿಸಿ, ಮಾನವೀಯತೆ ಮೆರೆದಿದ್ದಾರೆ.
ಈ ಕಾರ್ಯಕ್ಕೆ ಸ್ಥಳೀಯರು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೇಣುಗೋಪಾಲ್‌ರಿಗೆ ಮೆಚ್ಚುಗೆ ವ್ಯಕ್ತವಾಗಿದೆ.
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…