ಪಿಜಿ ಮಾಡುವುದಾಗಿ ಹೇಳಿ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ಮಾಡಿಕೊಂಡಿದ್ದು , ಮದ್ಯದ ಅಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ನಗರದ ಅಬಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರೇನಹಳ್ಳಿ ನಿವಾಸಿಗಳು.
ಈ ವೇಳೆ ಮಾತನಾಡಿದ ನಗರಸಭಾ ಸದಸ್ಯೆ ಪ್ರಭಾ ಅವರು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಗೆ ಒಳಪಡುವ ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ನರಸಿಂಹಮೂರ್ತಿ ಎಂಬ ವ್ಯಕ್ತಿ ತಯಾರಿ ನಡೆಸುತ್ತಿದ್ದಾರೆ.
ನಗರದ ವಾರ್ಡ್ ನಂ.31 ಕರೇನಹಳ್ಳಿಯಲ್ಲಿ ವಾರ್ಡ್ ಮಧ್ಯಭಾಗದಲ್ಲಿ ಮದ್ಯದ ಅಂಗಡಿ ತೆರೆಯಲಾಗಿದೆ. ಈ ಬಾರ್ ಓಪನ್ ಆಗಬಾರದು ಎಂದು ಈಗಾಗಲೇ ಅಬಕಾರಿ ಇಲಾಖೆಗೆ ಲಿಖಿತವಾಗಿ ಮನವಿ ಮಾಡಲಾಗಿತ್ತು. ಆದರೂ ಇದಕ್ಕೆ ಕ್ಯಾರೆ ಎನ್ನದೆ ಪಿಜಿ ಹೆಸರಲ್ಲಿ ಅಂಗಡಿ ತೆರೆಯಲಾಗಿದೆ ಎಂದು ತಿಳಿಸಿದರು.
ಈ ಮದ್ಯದ ಅಂಗಡಿ ಸುತ್ತಮುತ್ತಾ ದೇವಸ್ಥಾನ, ಶಾಲಾ-ಕಾಲೇಜು, ಮನೆಗಳು ಇವೆ. ಮಹಿಳಾ ಉದ್ಯೋಗಸ್ಥರು, ಶಾಲಾ-ಕಾಲೇಜು ಮಕ್ಕಳು ನಿತ್ಯ ಇದೇ ಅಂಗಡಿ ಮುಂಭಾಗದಲ್ಲಿ ಓಡಾಡಬೇಕಾಗಿದೆ. ಪ್ರತಿ ನಿತ್ಯ ಓಡಾಡಬೇಕಾದರೆ ಮಹಿಳೆಯರು, ಮಕ್ಕಳು ತುಂಬಾ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದರು.
ಅಂಗಡಿ ಸುತ್ತಾಮುತ್ತಾ ಕುಡಿದ ಅಮಲಿನಲ್ಲಿ ಇರುವ ವ್ಯಕ್ತಿಗಳೇ ಇರುತ್ತಾರೆ ಮಹಿಳೆಯರು ಒಂಟಿಯಾಗಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದಾರೆ ಆದ್ದರಿಂದ ಕೂಡಲೇ ಈ ಅಂಗಡಿಗೆ ಬೀಗ ಹಾಕಬೇಕು ಎಂಬುದು ನಮ್ಮ ಹಕ್ಕೋತ್ತಾಯ ಎಂದು ತಿಳಿಸಿದರು.
ಅಬಕಾರಿ ನಿರೀಕ್ಷಕರ ಮಾತಿಗೆ ಒಪ್ಪದ ಸ್ಥಳೀಯರು ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ, ಬಾರ್ ತೆರಯಲು ಅನುಮತಿ ನೀಡಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಅರಳು ಮಲ್ಲಿಗೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶಬೀರ್ ಪಾಷಾ, ಕಾಂಗ್ರೆಸ್ ಮುಖಂಡರಾದ ಬಷೀರ್, ನಗರ ಬ್ಲಾಕ್ ಅಧ್ಯಕ್ಷ ಜಗನ್ನಾಥ್, ಹೇಮಂತ್ ರಾಜ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…