ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ಸ್ಥಳೀಯರ ವಿರೋಧ; ಅನುಮತಿ ರದ್ದು ಮಾಡದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ

ಪಿಜಿ ಮಾಡುವುದಾಗಿ ಹೇಳಿ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ಮಾಡಿಕೊಂಡಿದ್ದು , ಮದ್ಯದ ಅಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ನಗರದ ಅಬಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರೇನಹಳ್ಳಿ ನಿವಾಸಿಗಳು.

ಈ ವೇಳೆ ಮಾತನಾಡಿದ ನಗರಸಭಾ ಸದಸ್ಯೆ ಪ್ರಭಾ ಅವರು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಗೆ ಒಳಪಡುವ ಕರೇನಹಳ್ಳಿಯಲ್ಲಿ ಮದ್ಯದ ಅಂಗಡಿ ತೆರೆಯಲು ನರಸಿಂಹಮೂರ್ತಿ ಎಂಬ ವ್ಯಕ್ತಿ ತಯಾರಿ ನಡೆಸುತ್ತಿದ್ದಾರೆ.

ನಗರದ ವಾರ್ಡ್ ನಂ.31 ಕರೇನಹಳ್ಳಿಯಲ್ಲಿ ವಾರ್ಡ್ ಮಧ್ಯಭಾಗದಲ್ಲಿ ಮದ್ಯದ ಅಂಗಡಿ ತೆರೆಯಲಾಗಿದೆ. ಈ ಬಾರ್ ಓಪನ್ ಆಗಬಾರದು ಎಂದು ಈಗಾಗಲೇ ಅಬಕಾರಿ ಇಲಾಖೆಗೆ ಲಿಖಿತವಾಗಿ ಮನವಿ ಮಾಡಲಾಗಿತ್ತು. ಆದರೂ ಇದಕ್ಕೆ ಕ್ಯಾರೆ ಎನ್ನದೆ ಪಿಜಿ ಹೆಸರಲ್ಲಿ ಅಂಗಡಿ ತೆರೆಯಲಾಗಿದೆ ಎಂದು ತಿಳಿಸಿದರು.

ಈ ಮದ್ಯದ ಅಂಗಡಿ ಸುತ್ತಮುತ್ತಾ ದೇವಸ್ಥಾನ, ಶಾಲಾ-ಕಾಲೇಜು, ಮನೆಗಳು ಇವೆ. ಮಹಿಳಾ ಉದ್ಯೋಗಸ್ಥರು, ಶಾಲಾ-ಕಾಲೇಜು ಮಕ್ಕಳು ನಿತ್ಯ ಇದೇ ಅಂಗಡಿ ಮುಂಭಾಗದಲ್ಲಿ ಓಡಾಡಬೇಕಾಗಿದೆ. ಪ್ರತಿ ನಿತ್ಯ ಓಡಾಡಬೇಕಾದರೆ ಮಹಿಳೆಯರು, ಮಕ್ಕಳು ತುಂಬಾ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದರು.

ಅಂಗಡಿ ಸುತ್ತಾಮುತ್ತಾ ಕುಡಿದ ಅಮಲಿನಲ್ಲಿ ಇರುವ ವ್ಯಕ್ತಿಗಳೇ ಇರುತ್ತಾರೆ ಮಹಿಳೆಯರು ಒಂಟಿಯಾಗಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದಾರೆ ಆದ್ದರಿಂದ ಕೂಡಲೇ ಈ ಅಂಗಡಿಗೆ ಬೀಗ ಹಾಕಬೇಕು ಎಂಬುದು ನಮ್ಮ ಹಕ್ಕೋತ್ತಾಯ ಎಂದು ತಿಳಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಬಕಾರಿ ಇಲಾಖೆ ನಿರೀಕ್ಷಕರಾದ ಎಸ್.ಎಮ್ ಪಾಟೀಲ್, ಈಗಾಗಲೇ ಬಾರ್ ತೆರೆಯುತ್ತಿರುವ ಬಗ್ಗೆ ಸ್ಥಳೀಯರು ನನ್ನ ಗಮನಕ್ಕೆ ತಂದಿದ್ದಾರೆ, ಸ್ಥಳೀಯರ ಮನವಿಯನ್ನು ಮೇಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗುವುದು ಮುಂದಿನ ನಿರ್ಧಾರ ಅವರೇ ತೆಗೆದುಕೊಳ್ಳುವರು ಎಂದರು.

ಅಬಕಾರಿ ನಿರೀಕ್ಷಕರ ಮಾತಿಗೆ ಒಪ್ಪದ ಸ್ಥಳೀಯರು ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ, ಬಾರ್ ತೆರಯಲು ಅನುಮತಿ ನೀಡಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಅರಳು ಮಲ್ಲಿಗೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶಬೀರ್ ಪಾಷಾ, ಕಾಂಗ್ರೆಸ್ ಮುಖಂಡರಾದ ಬಷೀರ್, ನಗರ ಬ್ಲಾಕ್ ಅಧ್ಯಕ್ಷ ಜಗನ್ನಾಥ್, ಹೇಮಂತ್ ರಾಜ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

2 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

5 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

7 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

8 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

9 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

13 hours ago