ಕರ್ತವ್ಯಲೋಪ, ದುರ್ನಡತೆ ತೋರಿದ ಹಿನ್ನೆಲೆ ರಾಮನಗರದ ಕಗ್ಗಲಿಪುರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ವಿಜಯಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ ಹೊರಡಿಸಿದ DGP ಅಲೋಕ್ ಮೋಹನ್.
ಅಧಿಕಾರ ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳ ಜೊತೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ಅಮಾನತು ಮಾಡಲಾಗಿದೆ ಎನ್ನಲಾಗಿದೆ. ಇನ್ಸ್ ಪೆಕ್ಟರ್ ವಿಜಯಕುಮಾರ್ ವಿರುದ್ಧ ಇಲಾಖಾ ತನಿಖೆ ಮಾಡುವಂತೆ ಆದೇಶ ಹೊರಡಿಸಲಾಗಿದೆ.