ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಹೊರತುಪಡಿಸಿ ಬೇರೆ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಂಡಿರುವ ಮತದಾರರಾದ ಮತಗಟ್ಟೆ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿ/ಸಿಬ್ಬಂದಿ ಕೆ.ಎಸ್.ಆರ್.ಟಿ.ಸಿ ವಾಹನ ಚಾಲಕರು, ಕಂಡಕ್ಟರ್, ಕ್ಲೀನರ್, ವಿಡಿಯೋ ಗ್ರಾಫರ್ ಗಳು ಇತರೆ ಚುನಾವಣಾ ಕರ್ತವ್ಯ ನಿರತ ನೌಕರ ವರ್ಗದವರಿಗೆ ತಿಳಿಸುವುದೇನೆಂದರೆ, ತರಬೇತಿ ಕೇಂದ್ರಗಳಲ್ಲಿ ಮತದಾನಕ್ಕೆ ನಮೂನೆ-12 ರಲ್ಲಿ ಅರ್ಜಿ ಸಲ್ಲಿಸಿರುವ ಅರ್ಹ ಚುನಾವಣಾ ಕರ್ತವ್ಯ ನಿರತ ಮತದಾರರಿಗೆ ಅನುಕೂಲವಾಗುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ 4 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಏ.22ರಿಂದ ಏ.23 ರವರೆಗೆ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿರುತ್ತದೆ.
ನೌಕರರು ಕೆಳಕಂಡ ಸೌಲಭ್ಯ ಕೇಂದ್ರಗಳಿಗೆ (Facilitation Centres) ಬಂದು ಮತದಾನ ಮಾಡಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಹೊಸಕೋಟೆ ಟೌನ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದೇವನಹಳ್ಳಿ ಟೌನ್ ಮಿನಿ ವಿಧಾನಸೌಧದ ತಾಲ್ಲೂಕು ಕಚೇರಿಯ ಕೊಠಡಿ ಸಂಖ್ಯೆ 01 ರಲ್ಲಿ
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡಬಳ್ಳಾಪುರದ ಮಾದಗೊಂಡನಹಳ್ಳಿ ಬಳಿ ಇರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಾಜ್ಯುಯೇಟ್ ಸೆಂಟರ್ ನಲ್ಲಿ
ನೆಲಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತಾಲ್ಲೂಕಿನ ಎಸ್.ಜೆ.ಎಂ ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು ಈ ಸೌಲಭ್ಯವನ್ನು ಪಡೆದು ಕರ್ತವ್ಯ ನಿರತ ನೌಕರರು ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.