ಕರ್ತವ್ಯ ನಿರತ ನೌಕರರು ಸೌಲಭ್ಯ ಕೇಂದ್ರಗಳಲ್ಲಿ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಸಲಹೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಹೊರತುಪಡಿಸಿ ಬೇರೆ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಂಡಿರುವ ಮತದಾರರಾದ ಮತಗಟ್ಟೆ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿ/ಸಿಬ್ಬಂದಿ ಕೆ.ಎಸ್.ಆರ್.ಟಿ.ಸಿ ವಾಹನ ಚಾಲಕರು, ಕಂಡಕ್ಟರ್, ಕ್ಲೀನರ್, ವಿಡಿಯೋ ಗ್ರಾಫ‌ರ್ ಗಳು ಇತರೆ ಚುನಾವಣಾ ಕರ್ತವ್ಯ ನಿರತ ನೌಕರ ವರ್ಗದವರಿಗೆ ತಿಳಿಸುವುದೇನೆಂದರೆ, ತರಬೇತಿ ಕೇಂದ್ರಗಳಲ್ಲಿ ಮತದಾನಕ್ಕೆ ನಮೂನೆ-12 ರಲ್ಲಿ ಅರ್ಜಿ ಸಲ್ಲಿಸಿರುವ ಅರ್ಹ ಚುನಾವಣಾ ಕರ್ತವ್ಯ ನಿರತ ಮತದಾರರಿಗೆ ಅನುಕೂಲವಾಗುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ 4 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಏ.22ರಿಂದ ಏ.23 ರವರೆಗೆ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿರುತ್ತದೆ.

ನೌಕರರು ಕೆಳಕಂಡ ಸೌಲಭ್ಯ ಕೇಂದ್ರಗಳಿಗೆ (Facilitation Centres) ಬಂದು ಮತದಾನ ಮಾಡಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಹೊಸಕೋಟೆ ಟೌನ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದೇವನಹಳ್ಳಿ ಟೌನ್ ಮಿನಿ ವಿಧಾನಸೌಧದ ತಾಲ್ಲೂಕು ಕಚೇರಿಯ ಕೊಠಡಿ ಸಂಖ್ಯೆ 01 ರಲ್ಲಿ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡಬಳ್ಳಾಪುರದ ಮಾದಗೊಂಡನಹಳ್ಳಿ ಬಳಿ ಇರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಾಜ್ಯುಯೇಟ್ ಸೆಂಟರ್ ನಲ್ಲಿ

ನೆಲಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತಾಲ್ಲೂಕಿನ ಎಸ್.ಜೆ.ಎಂ ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು ಈ ಸೌಲಭ್ಯವನ್ನು ಪಡೆದು ಕರ್ತವ್ಯ ನಿರತ ನೌಕರರು ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

4 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

6 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

6 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

7 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

9 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

13 hours ago