ಪೊಲೀಸ್ ವ್ಯವಸ್ಥೆ ರಾಜ್ಯದ, ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ.
ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದರು.
ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು ಎಂದು ಸೂಚಿಸಿದರು.
ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆ, ಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ GDP ಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ. ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಪೊಲೀಸ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…