ಕರ್ತವ್ಯ ನಿರತ ಹುತಾತ್ಮ ಸಿಬ್ಬಂದಿಯ ಗುಂಪು ವಿಮಾ ಹೆಚ್ಚಳ ಭರವಸೆ: 20ಲಕ್ಷದಿಂದ 50ಲಕ್ಷಕ್ಕೆ ಏರಿಕೆಯ ಭರವಸೆ ನೀಡಿದ ಸಿಎಂ

ಪೊಲೀಸ್ ವ್ಯವಸ್ಥೆ ರಾಜ್ಯದ, ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ.

ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.

ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ‌ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದರು.

ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು ಎಂದು ಸೂಚಿಸಿದರು.

ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆ, ಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ GDP ಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಮಹಿಳೆ, ಮಕ್ಕಳು ಮತ್ತು ಹಿರಿಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ರಕ್ಷಣೆ ಕೊಡುವ ಅಗತ್ಯವಿದೆ. ಸುಗಮ ಸಂಚಾರ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಹೀಗಾಗಿ ಹೆಚ್ಚುವರಿ ಪೊಲೀಸ್ ಹುದ್ದೆ ಸೃಷ್ಟಿಸಿದ್ದೇವೆ. ಹೆಚ್ಚುವರಿ ಮಹಿಳಾ ಮತ್ತು ಸಂಚಾರ ಠಾಣೆಗಳನ್ನು ಆರಂಭಿಸಿದ್ದೇವೆ. ಹೊಸ ವಾಹನ ಖರೀದಿಗೆ 100 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದರು.

2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ. ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಪೊಲೀಸ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

4 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

9 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

24 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago