ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 18 ಮಂದಿ ದುರ್ಮರಣಕ್ಕೀಡಾದ ಘಟನೆ ಬಳಿಕ ಭದ್ರತಾ ಸಿಬ್ಬಂದಿ ಕಟ್ಟೆಚ್ಚರದಿಂದ ಕಾರ್ಯನಿರತರಾಗಿದ್ದಾರೆ.
ಇದರ ನಡುವೆ ರೈಲ್ವೆ ಪೊಲೀಸ್ ಪಡೆಯ (ಆರ್‌ಪಿಎಫ್) ಮಹಿಳಾ ಕಾನ್‌ಸ್ಟೆಬಲ್ ಒಬ್ಬರು ಕರ್ತವ್ಯ ಮತ್ತು ತಾಯ್ತನ ಎರಡನ್ನೂ ಸರಿದೂಗಿಸಿಕೊಂಡು ಹೋಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ.
ಆರ್‌ಪಿಎಫ್ ಕಾನ್‌ಸ್ಟೆಬಲ್ ರೀನಾ ಎಂಬುವವರು ತಮ್ಮ 1 ವರ್ಷದ ಮಗುವನ್ನು ಎತ್ತಿಕೊಂಡೇ ರೈಲು ನಿಲ್ದಾಣದಲ್ಲಿ ಜನದಟ್ಟಣೆ ನಿಯಂತ್ರಣದಲ್ಲಿ ತೊಡಗಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅವರ ಬದ್ಧತೆಯನ್ನು ಕಂಡು ಪ್ರಯಾಣಿಕರು ಮೆಚ್ಚುಗೆ ಸೂಚಿಸಿದ್ದಾರೆ.