5 ಕೆ.ಜಿ ಅಕ್ಕಿ ಕೊಡಿ, ಉಳಿದ 5 ಕೆ.ಜಿ ಅಕ್ಕಿ ಕೊಡಲು ಆಗದಿದ್ರೆ ಹಣ ಕೊಡಿ ಎಂದು ನಮಗೆ ಬಿಟ್ಟಿ ಉಪದೇಶ ನೀಡುವ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಮುಂತಾದ ಬಿಜೆಪಿ ನಾಯಕರು ಒಂದು ಬಾರಿಯೂ ಇದು ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮ, ಕರ್ನಾಟಕಕ್ಕೆ ಅಕ್ಕಿ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿಲ್ಲ.
ಇದು ರಾಜ್ಯ ಬಿಜೆಪಿ ನಾಯಕರ ನೈಜ ಮುಖ. ಅವರಿಗೆ ಬಡವರಿಗೆ ಅಕ್ಕಿ ನೀಡುವುದಕ್ಕಿಂತ ಅನ್ನಭಾಗ್ಯ ಕಾರ್ಯಕ್ರಮ ಜಾರಿಯಾಗಬಾರದು ಎಂಬುದರಲ್ಲೇ ಹೆಚ್ಚು ಖುಷಿ ಸಿಗುತ್ತದೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೆ, ಮುನಿಯಪ್ಪ ಅವರು ಕೇಂದ್ರ ಸಚಿವ ಪಿಯುಷ್ ಗೋಯಲ್ ಅವರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಮಾಡಿದ್ದೆವು. ಎನ್.ಸಿ.ಸಿ.ಎಫ್, ನಫೆಟ್ ಹಾಗೂ ಕೇಂದ್ರೀಯ ಭಂಡಾರಗಳನ್ನು ಸಂಪರ್ಕಿಸಿದ್ದೆವು. ಅವರು ಕೂಡ ಹೆಚ್ಚು ಬೆಲೆ ನಮೂದಿಸಿದರು. ಆದ್ದರಿಂದ ನಾವು ಮುಕ್ತ ಮಾರುಕಟ್ಟೆ ಮೂಲಕ ಟೆಂಡರ್ ಕರೆಯಲು ನಿರ್ಧರಿಸಿದ್ದೇವೆ.
ನಾವು ಜುಲೈ ಒಂದರಿಂದ ಬಡವರಿಗೆ 10 ಕೆ.ಜಿ ಆಹಾರಧಾನ್ಯ ನೀಡುತ್ತೇವೆ ಎಂದು ಘೋಷಣೆ ಮಾಡಿದ್ದೆವು. ನಮಗೆ ಹೆಚ್ಚುವರಿಯಾಗಿ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದ್ದು ಇಷ್ಟು ಪ್ರಮಾಣದ ಅಕ್ಕಿಯನ್ನು ಬೇರೆ ರಾಜ್ಯಗಳು ನೀಡಲು ಸಿದ್ಧವಿಲ್ಲವರುವುದರಿಂದ ನಾವು ಮುಕ್ತ ಮಾರುಕಟ್ಟೆ ಮೂಲಕ ಟೆಂಡರ್ ಕರೆದು ಅಕ್ಕಿ ಪೂರೈಕೆಯಾಗುವ ವರೆಗೆ 5 ಕೆ.ಜಿ ಅಕ್ಕಿಯ ಬದಲಿಗೆ ಪ್ರತಿ ಕೆ.ಜಿ ಗೆ ರೂ.34 ರಂತೆ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತೇವೆ.
ನಾವು ನೀಡಿದ್ದ ವಾಗ್ದಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸರ್ಕಾರದ ನಡೆ ಪಾರದರ್ಶಕವಾಗಿರಲಿ ಎಂದು ಮುಕ್ತ ಮಾರುಕಟ್ಟೆ ಮೂಲಕ ಟೆಂಡರ್ ಕರೆದು ಅಕ್ಕಿ ಖರೀದಿಸಿ ಮುಂದಿನ ದಿನಗಳಲ್ಲಿ ತಲಾ 10 ಕೆ.ಜಿ ಅಕ್ಕಿಯನ್ನು ವಿತರಿಸುತ್ತೇವೆ. ಈ ಪ್ರಕ್ರಿಯೆಗೆ ಕೆಲ ಸಮಯ ಬೇಕಿರುವುದರಿಂದ ಜುಲೈ ಒಂದರಿಂದ ಹೆಚ್ಚುವರಿಯಾಗಿ ನೀಡಲು ಉದ್ದೇಶಿಸಿರುವ 5 ಕೆ.ಜಿ ಅಕ್ಕಿಯ ಬದಲಿಗೆ ತಲಾ ರೂ.170 ನಂತೆ ಹಣ ನೀಡುತ್ತೇವೆ ಎಂದು ತಿಳಿಸಿರುವ ಸಿಎಂ ಸಿದ್ದರಾಮಯ್ಯ.
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…