Categories: ರಾಜ್ಯ

ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಕುರಿತು ಪ್ರಧಾನಿ ಮೋದಿಯವರೇ ಉತ್ತರಿಸಬೇಕು- ಬಿಜೆಪಿಯ ಐಟಿ ಸೆಲ್ ಅಲ್ಲ- ಸಿಎಂ ಸಿದ್ದರಾಮಯ್ಯ

ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದೇನೆ. ಇದಕ್ಕೆ ಉತ್ತರ ನೀಡಬೇಕಾಗಿರುವವರು ಪ್ರಧಾನಿ ನರೇಂದ್ರ ಮೋದಿಯವರೇ ಹೊರತು ಬಿಜೆಪಿಯ ಐಟಿ ಸೆಲ್ ಅಲ್ಲ.  ಪ್ರಧಾನಿಯವರು ಒಪ್ಪಿದ ದಿನ ಮತ್ತು ಸ್ಥಳವನ್ನು ನಿಗದಿಪಡಿಸಿದರೆ ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾಡಿಗೆ ಬರಗಾಲ ಬಿದ್ದು ಆರು ತಿಂಗಳುಗಳಾಗಿವೆ. ಬರಪರಿಹಾರದ ಕೆಲಸಗಳಿಗಾಗಿ 18,177 ಕೋಟಿ ರೂಪಾಯಿ  ನೀಡಲು ಮೂರು ತಿಂಗಳುಗಳಿಂದ ಒತ್ತಾಯಿಸುತ್ತಾ ಬಂದಿದ್ದೇವೆ. ಪತ್ರ ಬರೆದಿದ್ದೇವೆ, ನಾನೇ ಖುದ್ದಾಗಿ ಹೋಗಿ ಪ್ರಧಾನಮಂತ್ರಿಯವರನ್ನು ಭೇಟಿಯಾಗಿ ನಮ್ಮ ರೈತರ ಕಷ್ಟಗಳನ್ನು ವಿವರಿಸಿದ್ದೇನೆ.. ಇಲ್ಲಿಯವರೆಗೆ ಒಂದು ಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದಿದ್ದಾರೆ.

ಯುಪಿಎ ಸರ್ಕಾರದ 14ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ನಿಗದಿಪಡಿಸಿದ್ದ ಶೇ.4.72 ತೆರಿಗೆ ಪಾಲನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ 15ನೇ ಹಣಕಾಸು ಆಯೋಗವು ಶೇ.3.64 ಕ್ಕೆ ಇಳಿಕೆ ಮಾಡಿ ವಂಚಿಸಲಾಗಿದೆ. ಇದರಿಂದ ಕನ್ನಡಿಗರು ಕಳೆದ 4 ವರ್ಷಗಳಲ್ಲಿ ಸುಮಾರು 45,000 ಕೋಟಿ ರೂಪಾಯಿಯಷ್ಟು ಬೆವರಗಳಿಕೆಯಿಂದ ಕಟ್ಟಿದ ತೆರಿಗೆ ಹಣವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆಗಳಿಗೆ ನೀಡುತ್ತಿರುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿತಗೊಳಿಸಲಾಗುತ್ತಿದೆ. 2021-22ರ ಅವಧಿಯಲ್ಲಿ 20 ಸಾವಿರ ಕೋಟಿ ರೂಪಾಯಿ ಇದ್ದ ಅನುದಾನ, 2022-23ರಲ್ಲಿ 13 ಸಾವಿರ ಕೋಟಿ ರೂಪಾಯಿಗೆ ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕಕ್ಕೆ 5,495 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವಂತೆ 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿತ್ತು. ಆದರೆ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್‌ ಅವರು ಈ ಶಿಫಾರಸ್ಸನ್ನು ತಿರಸ್ಕರಿಸಿದ್ದಾರೆ. ಆರ್ಥಿಕ ವರ್ಷ ಆರಂಭವಾಗಿ 6 ತಿಂಗಳು ಕಳೆದರೂ ಕೇಂದ್ರ ಸರ್ಕಾರದ ಸಹಯೋಗದ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಕೃಷ್ಣಾ ಮೇಲ್ದಂಡೆ ಮತ್ತು ಮಹದಾಯಿ ಯೋಜನೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಏಮ್ಸ್ ಸಂಸ್ಥೆ ಬೇಕೆಂಬ ಕನ್ನಡಿಗರ ಕನಸು ಇನ್ನೂ ಕನಸಾಗಿಯೇ ಉಳಿದಿದೆ. ಕನ್ನಡಿಗರು ಶ್ರಮದಿಂದ ಕಟ್ಟಿದ ಬ್ಯಾಂಕುಗಳು ವಿಲೀನದ ಹೆಸರಲ್ಲಿ ಬೇರೆ ರಾಜ್ಯಗಳ ನಷ್ಟದಲ್ಲಿರುವ ಬ್ಯಾಂಕುಗಳ ಜೊತೆ ವಿಲೀನ ಮಾಡಿ ಕನ್ನಡಿಗರಿಗೆ ದ್ರೋಹ ಬಗೆಯಲಾಯಿತು ಎಂದಿದ್ದಾರೆ.

ನಮ್ಮ ಹಿರೀಕರು ಕಷ್ಟಪಟ್ಟು ನಿರ್ಮಾಣ ಮಾಡಿದ್ದ ವಿಮಾನ ನಿಲ್ದಾಣವನ್ನು ಖಾಸಗಿಯವರಿಗೆ ಮಾರಲಾಯಿತು.  ಹದಿನೆಂಟು ಸಾವಿರ ಕೋಟಿ ರೂಪಾಯಿ ಬೆಂಗಳೂರು ಸಬ್‌ ಅರ್ಬನ್‌ ರೈಲು ಯೋಜನೆಗೆ ಅನುದಾನ ಇಲ್ಲದೆ ಸೊರಗಿ ಹೋಗಿದೆ. ಇನ್ನು ರಾಜ್ಯದ ಇತರೆ ರೈಲ್ವೇ ಯೋಜನೆಗಳನ್ನು ಮೂಲೆಗೆ ತಳ‍್ಳಲಾಗಿದೆ ಎಂದು ಹೇಳಿದ್ದಾರೆ.

ತೆರೆದ ಪುಸ್ತಕದಲ್ಲಿ ಕಾಣುವ ಈ ಅನ್ಯಾಯಗಳನ್ನು ಕಂಡು ಮೌನವಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕ್ರಿಯೆಯನ್ನು ಹೇಗೆ ವ್ಯಾಖ್ಯಾನಿಸಲಿ? ಉದ್ದೇಶಪೂರ್ವಕವಾದ ನಿರ್ಲಕ್ಷ್ಯ ಎನ್ನಲೇ? ಸಹಜವಾದ ನಿದ್ರಾ ಸ್ಥಿತಿ ಎನ್ನಲೇ? ಎಂದು ಪ್ರಶ್ನೆ ಮಾಡಿದ್ದಾರೆ.

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

1 hour ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

2 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

2 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

6 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

17 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

18 hours ago