ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ: ಕೇಂದ್ರದಿಂದ 1.87 ಲಕ್ಷ ಕೋಟಿ ತೆರಿಗೆ ಹಂಚಿಕೆಯಾಗಿಲ್ಲ- ಸಿಎಂ ಸಿದ್ದರಾಮಯ್ಯ ಆಕ್ರೋಶ

ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ. 2017-18 ರಿಂದ ಇಲ್ಲಿಯವರೆಗೆ ರಾಜ್ಯದ ಪಾಲಿಗೆ 1.87 ಲಕ್ಷ ಕೋಟಿ ತೆರಿಗೆ ಹಂಚಿಕೆ ಬರದೇ ಅನ್ಯಾಯವಾಗಿದೆ. ರಾಜ್ಯಕ್ಕೆ ಈ ಮಟ್ಟದ ನಷ್ಟವಾಗಿರುವುದನ್ನು ಸರಿಯೆಂದು ಬಿಜೆಪಿಯವರು ಹೇಳುತ್ತಾರೆಯೇ? ನಿನ್ನೆಯ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಅಧಿವೇಶನದಲ್ಲಿ ಮಾತನಾಡುತ್ತಾ, ರಾಜ್ಯ ತನ್ನ ಹಕ್ಕಿನ ಬಗ್ಗೆ ಪ್ರಶ್ನಿಸಿರುವುದನ್ನು ದೇಶ ವಿಭಜನೆ ಮಾಡುವ ವಿಷಯ ಎಂದು ವ್ಯಾಖ್ಯಾನಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪ್ರತಿಭಟನೆ ಮಾಡಿದ ರಾಜ್ಯದ ನಡೆಯನ್ನು ಟೀಕಿಸಿದ ಮೋದಿಯವರು, ತಾವು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ, ಗುಜರಾತ್ ರಾಜ್ಯಕ್ಕೆ ಸಾಕಷ್ಟು ಅನುದಾನ ಹಂಚಿಕೆಯಾಗುತ್ತಿಲ್ಲವೆಂದೂ ಅಂದಿನ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಾ, ‘60 ಸಾವಿರ ಕೋಟಿ ತೆರಿಗೆ ನೀಡುವ ಗುಜರಾತ್ ರಾಜ್ಯಕ್ಕೆ ಅನುದಾನ ಮರಳಿ ಬರುತ್ತಿಲ್ಲ, ಗುಜರಾತ್ ಭಿಕ್ಷೆ ಬೇಡುವ ರಾಜ್ಯವೇ? ಅಥವಾ ನಾವು ಭಿಕ್ಷುಕರೇ, ನಾವು ದೆಹಲಿಯಲ್ಲಿರುವವರ ಕರುಣೆಯ ಮೇಲೆ ಬದುಕಬೇಕೇ?’ಎಂದು ಟ್ವೀಟ್ ಮಾಡಿದ್ದರು. ಅಲ್ಲದೇ, 2008 ರಲ್ಲಿ ವಡೋದರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಗುಜರಾತ್ ರಾಜ್ಯ 40 ಸಾವಿರ ಕೋಟಿ ತೆರಿಗೆ ನೀಡಿದರೂ, ಕೇಂದ್ರದಿಂದ  ಕೇವಲ 2.5 ರಷ್ಟು ಅನುದಾನ ಬರುತ್ತಿದೆ. ಇಂತಹ ಕನಿಷ್ಟ ಪ್ರಮಾಣದ ಅನುದಾನ ನೀಡುವ ಬದಲು ಒಂದು ವರ್ಷಗಳ ವರೆಗೆ ಗುಜರಾತ್ ನಿಂದ ತೆರಿಗೆ ಪಡೆಯುವುದನ್ನು ಬಿಟ್ಟುಕೊಡಲಿ’  ಎಂದು ಹೇಳಿದ್ದರು. ಈ ರೀತಿ ಮಾತನಾಡಿದ ಮೋದಿಯವರು, ನಾವು ಪ್ರತಿಭಟನೆ ಮಾಡಿದರೆ ಭಾರತವನ್ನು ಒಡೆಯಲಾಗುತ್ತಿದ್ದೆ ಎಂದು ಟೀಕಿಸುತ್ತಿದ್ದಾರೆ. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ತೆರಿಗೆ ಹಂಚಿಕೆ ಬಗ್ಗೆ ಹೇಳಿರುವ ಮಾತಿಗೂ, ಪ್ರಧಾನಿಯಾಗಿ ಈಗ ಹೇಳುತ್ತಿರುವ ಮಾತನಾಡಿರುವ ಮೋದಿಯವರಿಗೆ ಎರಡು ನಾಲಿಗೆಗಳಿವೆಯೇ? ಎರಡು ರೀತಿಯ ಧೋರಣೆ ಹೊಂದಿರುವ ಪ್ರಧಾನಿ ಮೋದಿಯವರ ಮಾತಿಗೆ ಕಿಮ್ಮತ್ತಿರಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.

ನಾವು ರಾಜ್ಯದ ಹಾಗೂ ಕನ್ನಡಿಗರ ಹಿತರಕ್ಷಣೆ ಮಾಡಲು ನಮ್ಮ ಉದ್ದೇಶವಾಗಿದೆ. ಕರ್ನಾಟಕದಿಂದ 4,30,000 ಕೋಟಿ ತೆರಿಗೆ ಕೇಂದ್ರಕ್ಕೆ ಹೋಗಿದೆ. ಆದರೆ ನಮಗೆ 52,257 ಕೋಟಿ ಮಾತ್ರ ರಾಜ್ಯಕ್ಕೆ ಮರಳಿ ಬರುತ್ತದೆ. ಅಂದರೆ 100 ರೂ. ರಲ್ಲಿ ಕೇವಲ 13 ರೂ. ರಾಜ್ಯಕ್ಕೆ ಬರುತ್ತಿದೆ. ಈ ಅನ್ಯಾಯವನ್ನು ನಾವು ಪ್ರಶ್ನಿಸುತ್ತಿದ್ದೇವೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಕೊಡುವುದಾಗಿ ಹಾಗೂ ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಹೇಳಿದ್ದರು. ಆದರೆ ಹೇಳಿದ್ದ ಅನುದಾನ ಇನ್ನೂ ನೀಡಿಲ್ಲ. ರಾಜ್ಯಕ್ಕೆ 11,495 ಕೋಟಿ ವಿಶೇಷ ಅನುದಾನ ರಾಜ್ಯಕ್ಕೆ ನೀಡಿಲ್ಲ. 15ನೇ ಹಣಕಾಸು ಆಯೋಗದ ಶಿಫಾರಸ್ಸಿನಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲವೆಂದ ಕೇಂದ್ರ ವಿತ್ತಸಚಿವೆ, ಆಯೋಗದ ಶಿಫಾರಸ್ಸನ್ನು ಅಲ್ಲಗೆಳೆದು ರಾಜ್ಯಕ್ಕೆ ನೀಡುವ ಈ ಮೊತ್ತವನ್ನು ನೀಡಲು ನಿರಾಕರಿಸಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.

ಕಳೆದ 10 ವರ್ಷಗಳ ಅವಧಿಯಲ್ಲಿ ಕೇಂದ್ರದ ಬಜೆಟ್ ಗಾತ್ರ ಹೆಚ್ಚಾಗಿದ್ದು, ರಾಜ್ಯಕ್ಕೆ ನೀಡುವ ಅನುದಾನದ ಗಾತ್ರವೂ ಹೆಚ್ಚಾಗಬೇಕಾಗಿತ್ತು. ಇದು ರಾಜ್ಯಕ್ಕೆ ಆಗಿರುವ ಅನ್ಯಾಯ. ಈ ವಿಷಯದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ  ಕರ್ನಾಟಕದ ಬಿಜೆಪಿ ಸಂಸದರು ರಾಜ್ಯದ ಹಿತ ಕಾಯುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

7 minutes ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

11 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

12 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

14 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

22 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago