ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ-ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕಲು ಭಾರತದದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕರಾಳ ಇತಿಹಾಸ ಕಾಂಗ್ರೆಸ್ ಪಕ್ಷದ್ದು. ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿರುವ ವಿರೋಧ ಪಕ್ಷವನ್ನು ದಮನ ಮಾಡಲು ವಿರೋಧಿ ರಾಜಕೀಯ ನೇತಾರರು ಹಾಗೂ ಪ್ರಮುಖರನ್ನು ಜೈಲಿಗೆ ತಳ್ಳಿದ ಕುಖ್ಯಾತಿ ಕಾಂಗ್ರೆಸ್ ಪಕ್ಷದ್ದು. ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಧ್ಯಮ ಕಚೇರಿಗಳಿಗೆ ಬೀಗ ಜಡಿದು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ಸಂವಿಧಾನದ ಆಶಯದ ಮೇಲೆ ಅಟ್ಟಹಾಸ ಮೆರೆದ ಇತಿಹಾಸ ಕಾಂಗ್ರೆಸ್ ಪಕ್ಷದ್ದು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಅಧಿಕಾರಕ್ಕೆ ಬಂದಾಗಲೆಲ್ಲಾ ಪಾಳೆಗಾರಿಕೆ ಗುಂಗಿನಲ್ಲಿ ವರ್ತಿಸುವ ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಕಳೆದ 2 ವರ್ಷಗಳಲ್ಲಿ ನಿರಂಕುಶ ಪ್ರಭುತ್ವ ಸಾಧಿಸಲು ಹವಣಿಸುತ್ತಿದ್ದಾರೆ. ಸರಣಿ ಭ್ರಷ್ಟಾಚಾರಗಳು, ಅಭಿವೃದ್ಧಿ ಶೂನ್ಯ ಆಡಳಿತವನ್ನು ಪ್ರಶ್ನಿಸಿ ಹೋರಾಡುತ್ತಿರುವ ವಿರೋಧ ಪಕ್ಷಗಳನ್ನು ಈವರೆವಿಗೂ ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಬೆದರಿಸುತ್ತಿದ್ದ ಕಾಂಗ್ರೆಸ್, ವಿಧಾನ ಸಭೆಯ ಅಧ್ಯಕ್ಷರನ್ನು ಬಳಸಿಕೊಂಡು ವಿರೋಧ ಪಕ್ಷದ 18 ಸದಸ್ಯರನ್ನು ಸುದೀರ್ಘ ಅವಧಿಗೆ ಅಮಾನತು ಮಾಡಿ ಸಭಾಧ್ಯಕ್ಷ ಪೀಠವನ್ನು ತನ್ನ ಸರ್ವಾಧಿಕಾರತನ ಪ್ರದರ್ಶಿಸಲು ಬಳಸಿಕೊಂಡಿತ್ತು ಎಂದು ಹೇಳಿದ್ದಾರೆ.

ಇದೀಗ ಸಾಧನೆಯ ಹೆಸರಿನಲ್ಲಿ ರಾಜ್ಯದ ಜನರಿಗೆ ಸುಳ್ಳು ಹೇಳಲು ಹೊರಟು ಬರಿದಾಗಿರುವ ಬೊಕ್ಕಸವನ್ನು ಮತ್ತಷ್ಟು ಬರಿದು ಮಾಡಲು ದುಂದುವೆಚ್ಚದಲ್ಲಿ ‘ಸಾಧನ ಸಮಾವೇಶ’ ಮಾಡಲು ಹೊರಟ ಜನವಿರೋಧಿ ನಡೆಯನ್ನು ಪ್ರಶ್ನಿಸಿ ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಮಾಧ್ಯಮಗಳ ಮೂಲಕ ಜಾಹಿರಾತು ಬಿಡುಗಡೆ ಮಾಡಿದರೆ ಅದರಿಂದ ವಿಚಲಿತಗೊಂಡು ಮಾನನಷ್ಟ ಮೊಕದ್ದಮೆ ಹೂಡಲು ಹೊರಟಿದೆ. ಇದಕ್ಕೆ ಸರ್ಕಾರದ ವ್ಯವಸ್ಥೆ ಹಾಗೂ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ಇದೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ವಿರೋಧ ಪಕ್ಷ ಹಾಗೂ ಮಾಧ್ಯಮದವರನ್ನು ಬೆದರಿಸುವ ಕರಾಳ ಅಧಿಸೂಚನೆ ಹೊರಡಿಸಿದೆ. ಕೇವಲ ಜಾಹಿರಾತಿಗೆ ಇಷ್ಟೊಂದು ಹೆದರಿರುವ ಕಾಂಗ್ರೆಸ್ ಸರ್ಕಾರದ ನಡೆ ಪಲಾಯನವಾದ ಹಾಗೂ ‘ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆ’ ಎಂಬುದನ್ನು ಪ್ರತಿಬಿಂಬಿಸುತ್ತಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಯಾವುದೇ ಬೆದರಿಕೆಗೂ ರಾಜ್ಯ ಬಿಜೆಪಿ ಅಂಜುವ ಪ್ರಶ್ನೆಯೇ ಇಲ್ಲ. ಪೊಲೀಸ್ ಹಾಗೂ ಕಾನೂನಿನ ಹೆಸರಿನಲ್ಲಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನದ ಪರಮಾವಧಿಯಲ್ಲದೇ ಬೇರೆನೂ ಅಲ್ಲ. ನಿಮ್ಮ ಸರ್ವಾಧಿಕಾರಿ ಮನಃಸ್ಥಿತಿಗೆ ಭಟ್ಟಂಗಿಗಳ ಹಾಗೂ ಅವಿವೇಕಿಗಳ ಸಲಹೆಯನ್ನು ಆಧರಿಸಿ, ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿರುವುದು ಕೇವಲ ಭಾರತೀಯ ಜನತಾ ಪಾರ್ಟಿ ವಿರುದ್ಧವಷ್ಟೇ ಅಲ್ಲ, ಮಾಧ್ಯಮಗಳ ವಿರುದ್ಧವೂ ಸೇಡು ತೀರಿಸಿಕೊಳ್ಳಲು ಹೊರಟಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ, ಅದನ್ನು ಹಿಮ್ಮೆಟ್ಟಿಸುವ ಶಕ್ತಿ ಪ್ರಜಾಪ್ರಭುತ್ವಕ್ಕಿದೆ, ಕರ್ನಾಟಕದ ಜನರಿಗಿದೆ, ವಿರೋಧ ಪಕ್ಷಗಳಿಗಿದೆ, ಮಾಧ್ಯಮಗಳಿಗಿದೆ ಎಂಬುದನ್ನು ಶೀಘ್ರದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಎದುರು ನೋಡಲಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

7 hours ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

21 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

21 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

1 day ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago