Categories: ಹವಾಮಾನ

ಕರ್ನಾಟಕದಲ್ಲಿ ಮಂಜಿನ ಮುಸುಕು; ಎಲ್ ನೀನೋ ಪ್ರಭಾವದಿಂದ ಚಳಿ ಕಡಿಮೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಚಳಿಗಾಲದ ಆರಂಭದ ಸೂಚನೆಗಳು ಕಾಣಿಸತೊಡಗಿದ್ದು, ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಮಂಜಿನ ವಾತಾವರಣ ಆವರಿಸುತ್ತಿದೆ. ವಿಜಯಪುರ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಕುಸಿದಿದೆ. ಆದರೆ, ಎಲ್ ನೀನೋ ಪರಿಣಾಮದಿಂದ ಈ ಬಾರಿ ಚಳಿಯ ತೀವ್ರತೆ ಕಡಿಮೆ ಇರಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

15 ಜಿಲ್ಲೆಗಳಲ್ಲಿ ತಾಪಮಾನ ಕುಸಿತ

ಸೋಮವಾರ ರಾಜ್ಯದ 15 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ವಾಡಿಕೆಗಿಂತ ಕಡಿಮೆಯಾಗಿದೆ. ಉತ್ತರ ಒಳನಾಡಿನ ವಿಜಯಪುರದಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ವಾಡಿಕೆಗಿಂತ 4.7 ಡಿಗ್ರಿ ಕಡಿಮೆಯಾಗಿದೆ. ಗದಗದಲ್ಲಿ 15.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ವಾಡಿಕೆಗಿಂತ 4.1 ಡಿಗ್ರಿ ಕಡಿಮೆಯಾಗಿದೆ.

ಧಾರವಾಡದಲ್ಲಿ 15.4 ಡಿಗ್ರಿ, ಬೆಳಗಾವಿಯಲ್ಲಿ 15.6 ಡಿಗ್ರಿ, ಬಾಗಲಕೋಟೆಯಲ್ಲಿ 16.5 ಡಿಗ್ರಿ ಹಾಗೂ ರಾಯಚೂರಿನಲ್ಲಿ 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಮುಂದಿನ ಏಳು ದಿನ ಮಂಜಿನ ವಾತಾವರಣ

ಮುಂದಿನ ಏಳು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಬೆಳಗಿನ ಸಮಯದಲ್ಲಿ ಚಳಿ ಹಾಗೂ ಮಂಜಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಹಗಲಿನಲ್ಲಿ ಸಾಮಾನ್ಯವಾಗಿ ಬಿಸಿಲಿನ ವಾತಾವರಣ ಇರಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ಈ ಬಾರಿ ಚಳಿಯ ತೀವ್ರತೆ ಕಡಿಮೆ?

ಪ್ರಸಕ್ತ ಸಾಲಿನಲ್ಲಿ ಎಲ್ ನೀನೋ ಪರಿಣಾಮದಿಂದ ಮುಂಗಾರು ಮತ್ತು ಹಿಂಗಾರು ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಚಳಿಗಾಲದಲ್ಲಿಯೂ ಚಳಿಯ ತೀವ್ರತೆ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಹಿಂಗಾರು ಮಳೆಯ ಅವಧಿ ಅಂತ್ಯಗೊಂಡಿದ್ದು, ನವೆಂಬರ್ ಎರಡನೇ ವಾರದವರೆಗೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ. ಬೆಳಗಿನ ಜಾವ ಚಳಿ ಹೆಚ್ಚಾಗಿ ಅನುಭವಕ್ಕೆ ಬಂದರೂ, ಹಗಲಿನ ತಾಪಮಾನ ಸಾಮಾನ್ಯ ಮಟ್ಟದಲ್ಲಿಯೇ ಇರುವ ನಿರೀಕ್ಷೆಯಿದೆ.

Ramesh Babu

Journalist

Recent Posts

ಎಮ್ಮೆ, ಹಸು, ದನ, ಕುರಿ, ಮೇಕೆ ಕಾಯುತ್ತಾ….

ಶ್ರಮದಾನ ಪರಿಕಲ್ಪನೆಯ ಎಂಟನೆಯ ಉದ್ಯೋಗವಾಗಿ ದಿನಾಂಕ 25/10/2026ರ ಭಾನುವಾರ ಬೆಳಗ್ಗೆ ಮನೆಯಿಂದ ಹೊರಟು ಬಸ್ಸಿನಲ್ಲಿ ತುಮಕೂರು ಜಿಲ್ಲೆಯ ತುಮಕೂರು ಗ್ರಾಮಾಂತರ…

25 seconds ago

ಉಜ್ಜಿನಿ ಗ್ರಾಮದಲ್ಲಿ ಎರಡು ಚಿರತೆಗಳ ಪ್ರತ್ಯಕ್ಷ ವಿಚಾರ: ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಉಜ್ಜಿನಿ ಗ್ರಾಮದ ವ್ಯಾಪ್ತಿಯಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ…

11 hours ago

ಉಜ್ಜಿನಿ ಗ್ರಾಮದಲ್ಲಿ ಎರಡು ಚಿರತೆಗಳ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಉಜ್ಜಿನಿ ಗ್ರಾಮದ ವ್ಯಾಪ್ತಿಯಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಸೋಮವಾರ ಸಂಜೆ…

11 hours ago

ವಾಲ್ಮೀಕಿ ರಾಮಾಯಣ ಭಾರತೀಯ ಸಂಸ್ಕೃತಿಯ ಪ್ರತಿಬಿಂಬ- ಪ್ರೊ. ಕೆ.ಆರ್. ರವಿಕಿರಣ್

ದೊಡ್ಡಬಳ್ಳಾಪುರ: ವಾಲ್ಮೀಕಿ ರಾಮಾಯಣವು ಪ್ರಾಚೀನ ಭಾರತದ ಸಂಸ್ಕೃತಿ, ಧರ್ಮ, ರಾಜನೀತಿ, ಕುಟುಂಬ ವ್ಯವಸ್ಥೆ, ಪ್ರಕೃತಿ ಸೌಂದರ್ಯ ಹಾಗೂ ಮಾನವೀಯ ಮೌಲ್ಯಗಳನ್ನು…

20 hours ago

ಗುಂಡಿಮಯ ರಸ್ತೆಗಳು, ಕೆಸರುಗದ್ದೆಯಾದ ಬಡಾವಣೆ, ಲೇಔಟ್ ಗಳ ಸಂಪರ್ಕ ಮಾರ್ಗ..!!

ದೊಡ್ಡಬಳ್ಳಾಪುರ: ಯೋಗಿ ನಾರಾಯಣ ಬಡಾವಣೆ, ನಿಜಗಲ್ ಲೇಔಟ್ ಹಾಗೂ ನಂದಿ ಲೇಔಟ್‌ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಮೂರ್ನಾಲ್ಕು…

2 days ago

ಬಿರುಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಬೇವಿನ ಮರ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಸಮೀಪ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಬೃಹತ್ ಬೇವಿನ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ…

2 days ago