ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯಾಗಿ ವಿ.ಅನ್ಬುಕುಮಾ‌ರ್ ನೇಮಕ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯಾಗಿ 2004ನೇ ಸಾಲಿನ ಐಎಎಸ್ ಅಧಿಕಾರಿ ವಿ. ಅನ್ಬುಕುಮಾ‌ರ್ ಅವರನ್ನು ನೇಮಿಸಲಾಗಿದೆ.

ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. ರಾಜ್ಯ ವಸತಿ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಅನ್ಬುಕುಮಾ‌ರ್ ಅವರನ್ನು ಬಿಡುಗಡೆ ಮಾಡಲಾಗಿದೆ.

ಮುಖ್ಯ ಚುನಾವಣಾಧಿಕಾರಿಯಾಗಿದ್ದ ಮನೋಜ್‌ಕುಮಾರ್ ಮೀನಾ ಅವರ ಸ್ಥಾನಕ್ಕೆ ಅನ್ಬುಕುಮಾರ್‌ ಅವರನ್ನು ನಿಯೋಜಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!