ಕರ್ನಾಟಕದ ಹೆಮ್ಮೆ, ಐತಿಹಾಸಿಕ ಮೈಸೂರು ಸ್ಯಾಂಡಲ್ ಸೋಪ್ ಅತ್ಯುತ್ತಮವಾಗಿ ಮಾರಾಟವಾಗುತ್ತಿದೆ. ಮಾಸಿಕ ರೂ. 133 ಕೋಟಿಗೂ ಅಧಿಕ ವಹಿವಾಟು ನಡೆಸಲಾಗುತ್ತಿದೆ. ಕಂಪನಿಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ 2023ರ ನವೆಂಬರ್ ನಲ್ಲಿ ಮಾಸಿಕ ಉತ್ಪಾದನೆ 4,144 ಮೆಟ್ರಿಕ್ ಟನ್ ದಾಟಿದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಯಾವುದೇ ಹೆಚ್ಚುವರಿ ಹೂಡಿಕೆಯಿಲ್ಲದೆ, ಸುಧಾರಿತ ದಕ್ಷತೆಯಿಂದ ಈ ಸಾಧನೆ ಸಾಧ್ಯವಾಗಿದೆ. ಈ ವರ್ಷ ಕೆಎಸ್ ಡಿಎಲ್ ವಾರ್ಷಿಕ ಆದಾಯ 2,000 ಕೋಟಿ ದಾಟಬೇಕು. ಮುಂದಿನ ಐದು ವರ್ಷಗಳಲ್ಲಿ, ವಾರ್ಷಿಕ ಆದಾಯ 1 ಬಿಲಿಯನ್ ಡಾಲರ್ ಗೆ ತಲುಪಬೇಕು ಎಂಬುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದ್ದಾರೆ.