ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ 2023-24ನೇ ಸಾಲಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ-ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-1(ಸಹಾಯಧನ ಗರಿಷ್ಠ ರೂ.1.00 ಲಕ್ಷ), ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-2 (ಸಹಾಯಧನ ಗರಿಷ್ಠ ರೂ.2.00 ಲಕ್ಷ), ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-3-ಸ್ವಾವಲಂಭಿ ಸಾರಥಿ ಯೋಜನೆ (ಸರಕು ವಾಹನ/ಟ್ಯಾಕ್ಸಿ(ಹಳದಿ ಬೋರ್ಡ್) ಸಹಾಯಧನ ಗರಿಷ್ಠ ರೂ.4.00 ಲಕ್ಷ), ಮೈಕ್ರೋ ಕ್ರೆಡಿಟ್(ಪ್ರೇರಣಾ) (ಮಹಿಳಾ ಸ್ವ ಸಹಾಯ ಗುಂಪುಗಳಿಗೆ), ಭೂ ಒಡೆತನ ಯೋಜನೆಯಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಯುವ ಸಲುವಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಅಕ್ಟೋಬರ್ 31 ರಿಂದ ನವೆಂಬರ್ 29 ರವರೆಗೆ ಸಲ್ಲಿಸಬಹುದಾಗಿದೆ.
ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು ಈ ಕೆಳಕಂಡಂತಿವೆ
ಅರ್ಜಿದಾರರು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ ಕನಿಷ್ಠ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು ಕನಿಷ್ಠ 21 ರಿಂದ 50 ವರ್ಷ ಮೇಲ್ಪಟ್ಟವರಾಗಿರಬೇಕು.
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ.1,50,000 ಹಾಗೂ ನಗರ ಪ್ರದೇಶವಾದಲ್ಲಿ ರೂ. 2,00,000 ಮಿತಿಯೊಳಗಿರಬೇಕು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು.
ಅರ್ಜಿದಾರರು ಹಾಗೂ ಅವರ ಕುಟುಂಬದವರು ಯಾವುದೇ ನಿಗಮಗಳಿಂದ ಈ ಹಿಂದೆ ಸಾಲ ಸೌಲಭ್ಯ ಪಡೆದಿರಬಾರದು.
ಅರ್ಜಿದಾರರು ಆನ್‌ಲೈನ್‌ನಲ್ಲಿ ಸಲ್ಲಿಸಬೇಕಾದ ದಾಖಲಾತಿಗಳ ವಿವರ. ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ. ಆರ್.ಡಿ ನಂಬರ್ ಹೊಂದಿರುವ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ. ಪಡಿತರ ಚೀಟಿ/ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ ಅರ್ಜಿದಾರರ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್‌ಬುಕ್ ಪ್ರತಿ. ಇಚ್ಛಿಸುವ ಯೋಜನೆಗಳ ಯೋಜನಾ ವರದಿ. ವಾಹನದ ಪರವಾನಗಿ.
ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸುವವರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಅರ್ಹ ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳ ಅರ್ಜಿಗಳನ್ನು ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ https://sevasindhu.karnatak.gov.in ದಲ್ಲಿ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್, ಇವುಗಳ ಮೂಲಕ ಅಪ್‌ಲೋಡ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ಅಥವಾ ದೂರವಾಣಿ ಸಂಖ್ಯೆ: 080-29781036 ಹಾಗೂ ನಿಗಮದ ವೆಬ್‌ಸೈಟ್ ನಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಆದಿಜಾಂಬವ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…