ತಾಲೂಕಿನ ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಲೂಟಿ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಉತ್ತರ ಪ್ರದೇಶದ ಪೊಲೀಸರ ಸಹಕಾರದಿಂದ ಇಬ್ಬರು ಖದೀಮರನ್ನು ಗುರುವಾರ ಉತ್ತರ ಪ್ರದೇಶದ ಬದಾಯೂನ್ ಜಿಲ್ಲೆಯ ಅಲಾಪುರ್ ನಲ್ಲಿ ಬಂಧಿಸಿದ್ದಾರೆ.
ಉತ್ತರಪ್ರದೇಶ ಮೂಲದ ಅಲಾಪುರ ನಿವಾಸಿ ಟ್ರಕ್ ಚಾಲಕ ಸರ್ತಾಜ್ ಹಾಗೂ ಉಜಾನಿಯ ನಿವಾಸಿ ಕಾಳಿಚರಣ್ ಬಂಧಿತ ಆರೋಪಿಗಳು.
ಟ್ರಕ್ ನಲ್ಲಿ ಬಂದು ಲೂಟಿ:
ನ.25 ರಂದು ಸಿನಿಮೀಯ ಶೈಲಿಯಲ್ಲಿ ಬ್ಯಾಂಕ್ ಲೂಟಿ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದಿಂದ ಪೂರ್ವನಿಯೋಜಿತವಾಗಿ ಕಳ್ಳತನ, ಬ್ಯಾಂಕ್, ಮನೆಗಳ ಲೂಟಿ ಮಾಡಲೆಂದೆ ಬೃಹತ್ ಟ್ರಕ್ ರೆಡಿ ಮಾಡಿಕೊಂಡಿದ್ದರು.
ಈ ಟ್ರಕ್ ನಲ್ಲಿ ಕಳ್ಳತನಕ್ಕೆ ಬಳಸುವ ಉಪಕರಣಗಳು ಎಲ್ಲವೂ ಸಿದ್ಧವಿದ್ದವು. ಗ್ಯಾಸ್ ಕಟರ್, ಸಿಲಿಂಡರ್ ಸೇರಿದಂತೆ ಹಲವು ಉಪಕರಣಗಳನ್ನು ಇಟ್ಟುಕೊಂಡು ತಾಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಗೆ ಕನ್ನ ಹಾಕಿದ್ದರು.
ಗ್ಯಾಸ್ ಕಟರ್ ಮೂಲಕ ಶೆಟರ್ ಹಾಗೂ ಲಾಕರ್ ತೆರೆದು 12 ಕೆ.ಜಿ. ಚಿನ್ನಾಭರಣ ಹಾಗೂ 15 ಲಕ್ಷ ನಗದು ದೋಚಿ ಪರಾರಿಯಾಗಿದ್ದರು. ಬಹಳ ದಿನಗಳಿಂದ ಹೊಂಚು ಹಾಕಿದ ಕಳ್ಳರು, ಬ್ಯಾಂಕ್ ಬಳಿ ಚಲನವಲನಗಳನ್ನು ಗಮನಿಸಿ ಕಳುವು ಮಾಡಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ಟ್ರಕ್ ಪತ್ತೆ ಹಚ್ಚಿ ಹೋದ ಪೊಲೀಸರಿಗೆ ಆರೋಪಿಗಳ ಮಹತ್ವದ ಸುಳಿವು ಸಿಕ್ಕಿದೆ. ಅಲಾಪುರದ ಕಾಕರಾಲ ಪೊಲೀಸರ ನೆರವು ಪಡೆದು, ಆರೋಪಿಗಳನ್ನು ಬಂಧಿಸಿದ್ದಾರೆ.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…