ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ 2023-24ನೇ ಸಾಲಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ-ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-1(ಸಹಾಯಧನ ಗರಿಷ್ಠ ರೂ.1.00 ಲಕ್ಷ), ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-2 (ಸಹಾಯಧನ ಗರಿಷ್ಠ ರೂ.2.00 ಲಕ್ಷ), ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-3-ಸ್ವಾವಲಂಬಿ ಸಾರಥಿ ಯೋಜನೆ (ಸರಕು ವಾಹನ/ಟ್ಯಾಕ್ಸಿ(ಹಳದಿ ಬೋರ್ಡ್) ಸಹಾಯಧನ ಗರಿಷ್ಠ ರೂ.4.00 ಲಕ್ಷ), ಮೈಕ್ರೋ ಕ್ರೆಡಿಟ್(ಪ್ರೇರಣಾ) (ಮಹಿಳಾ ಸ್ವ ಸಹಾಯ ಗುಂಪುಗಳಿಗೆ), ಭೂ ಒಡೆತನ ಯೋಜನೆಯಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಯುವ ಸಲುವಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು 2023 ಅಕ್ಟೋಬರ್ 31 ರಿಂದ ನವೆಂಬರ್ 29 ರವರೆಗೆ ಸಲ್ಲಿಸಬಹುದಾಗಿದೆ.

ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು. ಅರ್ಜಿದಾರರು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ ಕನಿಷ್ಠ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

ಅರ್ಜಿದಾರರು ಕನಿಷ್ಠ 21 ರಿಂದ 50 ವರ್ಷ ಮೇಲ್ಪಟ್ಟವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ.1,50,000 ಹಾಗೂ ನಗರ ಪ್ರದೇಶವಾದಲ್ಲಿ ರೂ. 2,00,000 ಮಿತಿಯೊಳಗಿರಬೇಕು.

ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು. ಅರ್ಜಿದಾರರು ಹಾಗೂ ಅವರ ಕುಟುಂಬದವರು ಯಾವುದೇ ನಿಗಮಗಳಿಂದ ಈ ಹಿಂದೆ ಸಾಲ ಸೌಲಭ್ಯ ಪಡೆದಿರಬಾರದು.

ಅರ್ಜಿದಾರರು ಆನ್‌ಲೈನ್‌ನಲ್ಲಿ ಸಲ್ಲಿಸಬೇಕಾದ ದಾಖಲಾತಿಗಳ ವಿವರ: ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ. ಆರ್.ಡಿ ನಂಬರ್ ಹೊಂದಿರುವ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ.‌ ಪಡಿತರ ಚೀಟಿ/ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ ಅರ್ಜಿದಾರರ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್‌ಬುಕ್ ಪ್ರತಿ. ವಾಹನದ ಪರವಾನಗಿ.

ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸುವವರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.

ಅರ್ಹ ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳ ಅರ್ಜಿಗಳನ್ನು ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ https://sevasindhu.karnataka.gov.in ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್, ಇವುಗಳ ಮೂಲಕ ಅಪ್‌ಲೋಡ್ ಮಾಡಬೇಕು. ದೂರವಾಣಿ ಸಂಖ್ಯೆ:080-29781036 ಹಾಗೂ ನಿಗಮದ ವೆಬ್‌ಸೈಟ್ ನಲ್ಲಿ ಸಂಪರ್ಕಿಸಬಹುದಾಗಿದೆ ಎಂದು ತಾಂಡ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

4 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

15 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

20 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

23 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 day ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago