ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ 2023-24ನೇ ಸಾಲಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ-ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-1(ಸಹಾಯಧನ ಗರಿಷ್ಠ ರೂ.1.00 ಲಕ್ಷ), ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-2 (ಸಹಾಯಧನ ಗರಿಷ್ಠ ರೂ.2.00 ಲಕ್ಷ), ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-3-ಸ್ವಾವಲಂಬಿ ಸಾರಥಿ ಯೋಜನೆ (ಸರಕು ವಾಹನ/ಟ್ಯಾಕ್ಸಿ(ಹಳದಿ ಬೋರ್ಡ್) ಸಹಾಯಧನ ಗರಿಷ್ಠ ರೂ.4.00 ಲಕ್ಷ), ಮೈಕ್ರೋ ಕ್ರೆಡಿಟ್(ಪ್ರೇರಣಾ) (ಮಹಿಳಾ ಸ್ವ ಸಹಾಯ ಗುಂಪುಗಳಿಗೆ), ಭೂ ಒಡೆತನ ಯೋಜನೆಯಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಯುವ ಸಲುವಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು 2023 ರ ಅಕ್ಟೋಬರ್ 31 ರಿಂದ ನವೆಂಬರ್ 29 ರವರೆಗೆ ಸಲ್ಲಿಸಬಹುದಾಗಿದೆ.

ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು.

ಅರ್ಜಿದಾರರು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ ಕನಿಷ್ಠ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

ಅರ್ಜಿದಾರರು ಕನಿಷ್ಠ 21 ರಿಂದ 50 ವರ್ಷ ಮೇಲ್ಪಟ್ಟವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ.1,50,000 ಹಾಗೂ ನಗರ ಪ್ರದೇಶವಾದಲ್ಲಿ ರೂ. 2,00,000 ಮಿತಿಯೊಳಗಿರಬೇಕು.

ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು. ಅರ್ಜಿದಾರರು ಹಾಗೂ ಅವರ ಕುಟುಂಬದವರು ಯಾವುದೇ ನಿಗಮಗಳಿಂದ ಈ ಹಿಂದೆ ಸಾಲ ಸೌಲಭ್ಯ ಪಡೆದಿರಬಾರದು.

ಅರ್ಜಿದಾರರು  ಆನ್‌ಲೈನ್‌ನಲ್ಲಿ ಸಲ್ಲಿಸಬೇಕಾದ ದಾಖಲಾತಿಗಳ ವಿವರ

ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ. ಆರ್.ಡಿ ನಂಬರ್ ಹೊಂದಿರುವ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ.

ಪಡಿತರ ಚೀಟಿ/ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ ಅರ್ಜಿದಾರರ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್‌ಬುಕ್ ಪ್ರತಿ.

ಇಚ್ಛಿಸುವ ಯೋಜನೆಗಳ ಯೋಜನಾ ವರದಿ. ವಾಹನದ ಪರವಾನಗಿ. ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸುವವರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.

ಅರ್ಹ ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳ ಅರ್ಜಿಗಳನ್ನು ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ https://sevasindhu.karnataka.gov.in ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್, ಇವುಗಳ ಮೂಲಕ ಅಪ್‌ಲೋಡ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ಅಥವಾ ದೂರವಾಣಿ ಸಂಖ್ಯೆ:080-29781036 ಹಾಗೂ ನಿಗಮದ ವೆಬ್‌ಸೈಟ್ ನಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕ್ಷೇತ್ರದ ಮತದಾರರ ಪಟ್ಟಿ ಫೈನಲ್‌:ದೊಡ್ಡಬಳ್ಳಾಪುರದಲ್ಲಿ 1.94 ಲಕ್ಷ ಮತದಾರರು: 31,172 ಮತದಾರರ ಹೆಸರು ಡಿಲೀಟ್‌

ದೊಡ್ಡಬಳ್ಳಾಪುರ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026ರ ಪ್ರಕ್ರಿಯೆ ಪೂರ್ಣಗೊಂಡಿದ್ದು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.…

16 minutes ago

ವೀರಾಪುರ ರಸ್ತೆಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ನಗರದ ವೀರಾಪುರ ರಸ್ತೆಯಲ್ಲಿರುವ ಖಾಸಗಿ ಅಪಾರ್ಟ್‌ಮೆಂಟ್ ಎದುರಿನ ನಿರ್ಜನ‌ ಪ್ರದೇಶದಲ್ಲಿನ ರಾಜಕಾಲುವೆ ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ…

8 hours ago

ಪರವಾನಗಿ ಇಲ್ಲದೆ ಪಟಾಕಿ ದಾಸ್ತಾನು: 10 ಲಕ್ಷ ಮೌಲ್ಯದ ಸ್ಫೋಟಕ ವಸ್ತುಗಳ ವಶ: ಏಳು ಮಂದಿ ವಿರುದ್ಧ ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊಡಿಗೆಹಳ್ಳಿ ಗ್ರಾಮದಲ್ಲಿ ಯಾವುದೇ ಪರವಾನಗಿ ಇಲ್ಲದೆ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಅಕ್ರಮವಾಗಿ ಪಟಾಕಿಗಳನ್ನು ದಾಸ್ತಾನು…

9 hours ago

ಫಾಕ್ಸ್‌ಕಾನ್ ಕಂಪನಿ ಬಸ್‌– ಖಾಸಗಿ ಶಾಲಾ ವಾಹನ ನಡುವೆ ಡಿಕ್ಕಿ: ಮಕ್ಕಳು ಪಾರು

ದೊಡ್ಡಬಳ್ಳಾಪುರ: ಫಾಕ್ಸ್‌ಕಾನ್ ಕಂಪನಿಯ ಬಸ್ ಹಾಗೂ ಖಾಸಗಿ ಶಾಲಾ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೀತಂ ವಿಶ್ವವಿದ್ಯಾಲಯದ…

9 hours ago

ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟ: ಮತ ಎಣಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮಂಗಳವಾರ ಬೆಳಗ್ಗೆ…

10 hours ago

ಎಮ್ಮೆ, ಹಸು, ದನ, ಕುರಿ, ಮೇಕೆ ಕಾಯುತ್ತಾ….

ಶ್ರಮದಾನ ಪರಿಕಲ್ಪನೆಯ ಎಂಟನೆಯ ಉದ್ಯೋಗವಾಗಿ ದಿನಾಂಕ 25/10/2026ರ ಭಾನುವಾರ ಬೆಳಗ್ಗೆ ಮನೆಯಿಂದ ಹೊರಟು ಬಸ್ಸಿನಲ್ಲಿ ತುಮಕೂರು ಜಿಲ್ಲೆಯ ತುಮಕೂರು ಗ್ರಾಮಾಂತರ…

10 hours ago