ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ವೀಣೆ ತಯಾರಕ ಪೆನ್ನ ಓಬಳಯ್ಯ ವಿಧಿವಶ

ದೊಡ್ಡಬಳ್ಳಾಪುರ ತಾಲ್ಲೂಕಿನ ಸಿಂಪಾಡಿಪುರ ಗ್ರಾಮದ ವೀಣೆತಯಾರಕ ಹಾಗೂ 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪೆನ್ನ ಓಬಳಯ್ಯ(105) ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ.

ಮೃತರಿಗೆ ಮೂರು ಜನ ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ‌. ಮೃತರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಿಂಪಾಡಿಪುರದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ‌ ತಾಲ್ಲೂಕಿನ ಮಧುರೆ ಹೋಬಳಿಯ   ಸಿಂಪಾಡಿಪುರ ಗ್ರಾಮದಲ್ಲಿ ವೀಣೆ ತಯಾರಿಕೆಯ ಪರಂಪರೆಯನ್ನು ಪ್ರಾರಂಭಿಸಿದ ಪೆನ್ನ ಒಬಳಯ್ಯ ಅವರು ವೀಣೆ ತಯಾರಕರಲ್ಲಿ ಕೆಲಸ ಮಾಡುತ್ತಾ ಕಲೆಯನ್ನು ಕಲಿತರು ಮತ್ತು ನಂತರ ತಮ್ಮ ಗ್ರಾಮ ಸಿಂಪಾಡಿಪುರ ಬಂದು ಈ ಕರಕುಶಲತೆಯನ್ನು ಗ್ರಾಮಸ್ಥರಿಗೆ ಕಲಿಸಿದರು.

50 ವರ್ಷಗಳಿಂದಲೂ ವೀಣೆ ತಯಾರಿಸುತ್ತಾ ಬಂದಿರುವ ಈ ಗ್ರಾಮವು ಈಗಲೂ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆ. ಮೈಸೂರು ವೀಣೆಗಳನ್ನು ಇಲ್ಲಿ ತಯಾರಿಸಲಾಗುತ್ತದೆ. ವೀಣೆ ತಯಾರಿಕೆಯ ಪರಂಪರೆಯನ್ನು ಮುಂದುವರಿಸಲು ಹೊಸ ತಲೆಮಾರಿನ ಪ್ರತಿಭೆಗಳು ಈ ಕರಕುಶಲತೆಯನ್ನು ಜೀವಂತವಾಗಿರಿಸಲು ಪ್ರಯತ್ನಿಸುತ್ತಿವೆ.

ಸಿಂಪಾಡಿಪುರ ಗ್ರಾಮದಲ್ಲಿತ ಯಾರಾಗುವ ವೀಣೆಗಳು ಹೆಸರಾಂತ ಸಂಗೀತ ಕಲಾವಿದರ ಕೈಯಲ್ಲಿವೆ. ಸಾಮಾನ್ಯವಾಗಿ ವೀಣೆಗಳು ಸಿದ್ಧಗೊಳ್ಳುವುದು ತಮಿಳುನಾಡಿನ ತಂಜಾವೂರಿನಲ್ಲಿ, ನಂತರ ವೀಣೆ ತಯಾರಿಕೆಯಲ್ಲಿ ಗಮನ ಸೆಳೆದಿರುವುದು ಬೆಂಗಳೂರು ಬಳಿಯ ಸಿಂಪಾಡಿಪುರ ಗ್ರಾಮ. ಕಳೆದ ಐವತ್ತು ವರ್ಷಗಳಿಂದ, ಈ ಊರಿನಲ್ಲಿ ವೀಣೆ ಮತ್ತು ತಂಬೂರಿಗಳನ್ನು ತಯಾರು ಮಾಡುತ್ತಿದ್ದಾರೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

36 minutes ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

2 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

6 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

7 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

13 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

13 hours ago