2023-24ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳ ಬಹುಬೇಡಿಕೆಯ ಕೋರ್ಸ್‌ಗಳಾದ ಬಿ.ಎಸ್.ಡ್ಬ್ಲೂ ಎಂ.ಎಸ್.ಡ್ಬ್ಲೂ, ಹಾಗೂ ಎಂ.ಸಿ.ಎ. ಕೋರ್ಸ್‌ಗಳಿಗೆ ಪ್ರವೇಶಾತಿಯನ್ನು ಆರಂಭಿಸಿದ್ದು, ಇದರ ಜೊತೆಗೆ ಈ ಹಿಂದೆ ಪ್ರವೇಶಾತಿ ನೀಡುತ್ತಿದ್ದ ಕೋರ್ಸ್‌ಗಳಾದ ಬಿ.ಎ, ಬಿ.ಕಾಂ, ಬಿ.ಎಸ್ಸಿ., ಬಿ.ಬಿ.ಎ, ಬಿ.ಸಿ.ಎ., ಬಿ.ಲಿಬ್.ಐ.ಎಸ್ಸಿ, ಎಂ.ಎಸ್ಸಿ., ಎಂ.ಬಿ.ಎ., ಎಂ.ಲಿಬ್.ಐ.ಎಸ್ಸಿ, ಪಿ.ಜಿ. ಸರ್ಟಿಫಿಕೇಟ್, ಡಿಪ್ಲೊಮಾ ಮತ್ತು ಯು.ಜಿ ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 2023ರ ಆಗಸ್ಟ್ 31 ಅಂತಿಮ ದಿನಾಂಕವಾಗಿರುತ್ತದೆ. ಆನ್‌ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಿದ್ದು, ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.ksoumysuru.ac.in ನಲ್ಲಿ ವಿವರಗಳು ಲಭ್ಯವಿರುತ್ತದೆ.
ಅರ್ಹ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ಇದ್ದು ಇದನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆಸಿಕೊಳ್ಳುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರಾದ ದಿಲೀಪ್. ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್ www.ksoumysuru.ac.in ಮತ್ತು ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ 01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-28, ಕಚೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98449-65515 ಅನ್ನು ಸಂಪರ್ಕಿಸಬಹುದು.