ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಮತ್ತು ಶ್ರೀ ರಾಘವೇಂದ್ರ ಯೋಗ ಶಿಕ್ಷಣ ಕೇಂದ್ರದ ಆಶ್ರಯದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಪುಟ್ಟಮ್ಮ ಬೆಂಕಿಲಕ್ಷ್ಮಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್ ಷಿಪ್ ನಲ್ಲಿ ತಾಲ್ಲೂಕಿನ ನಿಸರ್ಗ ಯೋಗ ಕೇಂದ್ರದ ಯೋಗಪಟುಗಳು ಭಾಗವಹಿಸಿ 5 ಚಿನ್ನ, 5 ಬೆಳ್ಳಿ, 4 ಕಂಚು ಸೇರಿದಂತೆ ಒಟ್ಟು 25 ಬಹುಮಾನಗಳನ್ನು ಪಡೆದುಕೊಳ್ಳುವ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ ಎಂದು ಯೋಗಕೇಂದ್ರದ ಗೌರವ ಕಾರ್ಯದರ್ಶಿ ನಟರಾಜು ತಿಳಿಸಿದ್ದಾರೆ.
ಬಹುಮಾನ ಗೆದ್ದ ಯೋಗಪಟುಗಳು :-
8 ರಿಂದ 10 ವರ್ಷದ ಬಾಲಕರ ವಿಭಾಗದಲ್ಲಿ ಜೆ.ಸಿ.ಪ್ರಥಮಶೆಟ್ಟಿ ದ್ವಿತೀಯ ಸ್ಥಾನ, ಯಶ್ವಿನ್.ಎಸ್ 5ನೇ ಸ್ಥಾನ.
8 ರಿಂದ 10 ವರ್ಷದ ಬಾಲಕಿಯರ ವಿಭಾಗದಲ್ಲಿ ಎಸ್.ಅಪೂರ್ವ ದ್ವಿತೀಯ ಸ್ಥಾನ, ಎನ್ ಖುಷಿಪ್ರಿಯ ತೃತೀಯ ಸ್ಥಾನ, ಸಾನ್ವಿ.ಎಂ.ರಾಜು 6ನೇ ಸ್ಥಾನ.
10ರಿಂದ 12 ವರ್ಷದ ಬಾಲಕರ ವಿಭಾಗದಲ್ಲಿ ಎಸ್.ಕುಶಲ್ ಪ್ರಥಮ ಸ್ಥಾನ, ನೀರಜ್.ಎಲ್ ತೃತೀಯ ಸ್ಥಾನ, ವೇದಿಕ್ ಶೆಟ್ಟಿ 5ನೇ ಸ್ಥಾನ, ಹಿತೇಶ್.ಎ 6ನೇ ಸ್ಥಾನ.
10ರಿಂದ12 ವರ್ಷದ ಬಾಲಕಿಯರ ವಿಭಾಗದಲ್ಲಿ ಗೌತಮಿ.ಹೆಚ್.ಆರ್. ಪ್ರಥಮ ಸ್ಥಾನ, ಯಶಸ್ವಿನಿ.ಟಿ. ದ್ವಿತೀಯ ಸ್ಥಾನ, ಹಿತಶ್ರೀ ಕೆ.ಎಂ ತೃತೀಯ ಸ್ಥಾನ.
12ರಿಂದ 14 ವರ್ಷದ ಬಾಲಕರ ವಿಭಾಗದಲ್ಲಿ ಶಶಾಂಕ್.ಪಿ.ಎಸ್ ಪ್ರಥಮ ಸ್ಥಾನ, ಕೆ.ಎನ್.ವಿಶ್ವನಾಥ್ ತೃತೀಯ ಸ್ಥಾನ, ಎ.ಸಂಜಯ್ ಕುಮಾರ್ 5ನೇ ಸ್ಥಾನ,
12ರಿಂದ15 ಬಾಲಕಿಯರ ವಿಭಾಗದಲ್ಲಿ ರನಿತಾ.ಆರ್ 5ನೇ ಸ್ಥಾನ.
14ರಿಂಧ16 ವರ್ಷದ ಬಾಲಕೀಯರ ವಿಭಾಗದಲ್ಲಿ ಮಧುಶಾಲಿನಿ ಡಿ.ಎಸ್ 5ನೇಸ್ಥಾನ.
16ರಿಂದ18 ವರ್ಷದ ಯುವತಿಯರ ವಿಭಾಗದಲ್ಲಿ ಎಂ.ಆರ್.ಜಾಹ್ನವಿ, ದ್ವಿತೀಯ ಸ್ಥಾನ.
18ರಿಂದ 21 ವರ್ಶದ ಯುವಕರು ಕೆ.ವಿನಯ್ ಕುಮಾರ್, ಪ್ರಥಮ ಸ್ಥಾನ, ವರಪ್ರಸಾದ್.ವಿ ದ್ವಿತೀಯ ಸ್ಥಾನ, ಚೇತನ್ ರಾಮ್.ಕೆ.ಎಮ್ 6ನೇ ಸ್ಥಾನ,
21ರಿಂದ25 ವರ್ಷದ ಯುವತಿಯರು ಗಾನಶ್ರೀ.ಎ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
ಸ್ಪರ್ಧೆಯಲ್ಲಿ ಭಾಗವಹಿಸಿ ಜಯಗಳಿಸಿರುವ ಯೋಗಪಟುಗಳಿಗೆ ನಿಸರ್ಗ ಯೋಗ ಕೇಂದ್ರದ ಪದಾಧಿಕಾರಿಗಳು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಅಭಿನಂದಿಸಿ ಶುಭಹಾರೈಸಿದ್ದಾರೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…