ಅರ್ಹ ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು 2023 ರ ಅಕ್ಟೋಬರ್ 31 ರಿಂದ ನವೆಂಬರ್ 31 ರವರೆಗೆ ಸಲ್ಲಿಸಬಹುದಾಗಿದೆ.
ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು. ಅರ್ಜಿದಾರರು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ ಕನಿಷ್ಠ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು ಕನಿಷ್ಠ 21 ರಿಂದ 50 ವರ್ಷ ಮೇಲ್ಪಟ್ಟವರಾಗಿರಬೇಕು.
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ.1,50,000 ಹಾಗೂ ನಗರ ಪ್ರದೇಶವಾದಲ್ಲಿ ರೂ 2,00,000 ಮಿತಿಯೊಳಗಿರಬೇಕು.
ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು.
ಅರ್ಜಿದಾರರು ಹಾಗೂ ಅವರ ಕುಟುಂಬದವರು ಯಾವುದೇ ನಿಗಮಗಳಿಂದ ಈ ಹಿಂದೆ ಸಾಲ ಸೌಲಭ್ಯ ಪಡೆದಿರಬಾರದು.
ಅರ್ಜಿದಾರರು ಆನ್‌ಲೈನ್‌ನಲ್ಲಿ ಸಲ್ಲಿಸಬೇಕಾದ ದಾಖಲಾತಿಗಳ ವಿವರ: ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ. ಆರ್.ಡಿ ನಂಬರ್ ಹೊಂದಿರುವ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ. ಪಡಿತರ ಚೀಟಿ/ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ ಅರ್ಜಿದಾರರ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್‌ಬುಕ್ ಪ್ರತಿ. ಇಚ್ಛಿಸುವ ಯೋಜನೆಗಳ ಯೋಜನಾ ವರದಿ. ವಾಹನದ ಪರವಾನಗಿ.
ಅರ್ಹ ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳ ಅರ್ಜಿಗಳನ್ನು ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ https://sevasindhu.karnataka.gov.in ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್, ಇವುಗಳ ಮೂಲಕ ಅಪ್‌ಲೋಡ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ಅಥವಾ ದೂರವಾಣಿ ಸಂಖ್ಯೆ 080-29781036 ಹಾಗೂ ನಿಗಮದ ವೆಬ್‌ಸೈಟ್ ನಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…