2023 ನೇ ಸಾಲಿನ “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2023 ರ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿದ್ದು ಅಧಿಸೂಚಿತ ಬೆಳೆಗಳನ್ನು ಬೆಳೆಯುವ ರೈತರು ಈ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ರೈತರಲ್ಲಿ ಅರಿವು ಮೂಡಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಜಿಲ್ಲಾಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಮುಖ ಬೆಳೆಗಳಾದ ರಾಗಿ, ಮುಸುಕಿನ ಜೋಳ, ನೆಲಗಡಲೆ ಬೆಳೆ ಬೆಳೆಯುವ ರೈತರು ಈ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿರುತ್ತದೆ. ಬೆಳೆ ಸಾಲ ಪಡೆದ ರೈತರಿಗೆ ನೋಂದಣಿಯು ಐಚ್ಛಿಕವಾಗಿದ್ದು ಸಂಬಂಧಿಸಿದ ಬ್ಯಾಂಕ್ ಶಾಖೆಗೆ ಲಿಖಿತ ರೂಪದಲ್ಲಿ ದೃಢೀಕರಣ ಸಲ್ಲಿಸಬೇಕಾಗಿರುತ್ತದೆ. ನೆಲಗಡಲೆ ಬೆಳೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದ್ದು, ರಾಗಿ ಮತ್ತು ಮುಸುಕಿನ ಜೋಳ ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್ 16 ಕೊನೆಯ ದಿನವಾಗಿದೆ ಎಂದರು.
ಈ ನಿಟ್ಟಿನಲ್ಲಿ ರೈತರು ಬೆಳೆವಿಮೆಯಲ್ಲಿ ನೋಂದಾಯಿಸಿಕೊಳ್ಳಲು ತಾಲ್ಲೂಕು, ಹೋಬಳಿ, ಗ್ರಾಮಪಂಚಾಯಿತಿ ಮಟ್ಟದಲ್ಲಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಭಿತ್ತಿಪತ್ರಗಳು ಹಾಗೂ ಕರಪತ್ರಗಳನ್ನು ಹಂಚುವ ಮೂಲಕ ರೈತರಲ್ಲಿ ಅರಿವು ಮೂಡಿಸಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಕ್ರಮವಹಿಸುವಂತೆ ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು, ಬ್ಯಾಂಕ್ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಸೂಚಿಸಿದರು.
ಸಭೆಯಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗಳ ಕರಪತ್ರ ಹಾಗೂ ಭಿತ್ತಿಪತ್ರಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕರಾದ ವಿನುತ, ಎಂ.ಸಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಗುಣವಂತ ಜೆ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿಮೆ ಕಂಪನಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…