2024-25ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ನಡೆಯುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಡಾ ಬಿ,ಆರ್ ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿರುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್ ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಅರ್ಜಿ ಸಲ್ಲಿಸಲು 2023-24ನೇ ಸಾಲಿನಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಯಾಗಿರಬೇಕು. 6 ರಿಂದ 10 ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ಉಚಿತ ವಸತಿ, ಉಚಿತ ಊಟ ಶಿಕ್ಷಣ ನೀಡಲಾಗುವುದು.
ಆಸಕ್ತ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ,ಅಟಲ್ ಬಿಹಾರಿ ವಾಜಪೇಯಿ,ಡಾ. ಬಿ.ಆರ್ ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ ಭೇಟಿ ನೀಡಿ ಆನ್‌ಲೈನ್ ಮುಖಾಂತರ ಡಿಸೆಂಬರ್ 07 ರಿಂದ ಡಿಸೆಂಬರ್ 31 ರೂಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗಾಗಿ ಪ್ರಾಂಶುಪಾಲರು ಬಚ್ಚಹಳ್ಳಿ-8105526933, ಪ್ರಾಂಶುಪಾಲರು ಬೊಮ್ಮವಾರ-7349391473, ಪ್ರಾಂಶುಪಾಲರು ಕುಂದಾಣ-9902534050, ಪ್ರಾಂಶುಪಾಲರು ನೆಲಮಂಗಲ-8495812105, ಪ್ರಾಂಶುಪಾಲರು ಕೊಂಡ್ರಹಳ್ಳಿ-9902989639, ಪ್ರಾಂಶುಪಾಲರು ಬಾಲೇಪುರ-9448227951, ಪ್ರಾಂಶುಪಾಲರು ಬೈರಾಪುರ-9916582001, ಪ್ರಾಂಶುಪಾಲರು ಬೈರನಾಯಕನಹಳ್ಳಿ-7259882671, ಪ್ರಾಂಶುಪಾಲರು ಮಾರ್ಡಶ್ವರ-9845308319, ಹಾಗೂ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.217, 2ನೇ ಮಹಡಿ , ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂ.ಗ್ರಾ. ಜಿಲ್ಲೆ-562110. ದೂ.ಸಂ.080-29787447, ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂ.ಸಂ.080-27681784, ದೊಡ್ಡಬಳ್ಳಾಪುರ ತಾಲ್ಲೂಕು ದೂ.ಸಂ. 080-27623681, ಹೊಸಕೋಟೆ ತಾಲ್ಲೂಕು ದೂ.ಸಂ. 080-27931528, ನೆಲಮಂಗಲ ತಾಲ್ಲೂಕು ದೂ.ಸಂ.080-27723172, ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…