ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

2024-25ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ನಡೆಯುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಡಾ  ಬಿ,ಆರ್ ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್ ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಅರ್ಜಿ ಸಲ್ಲಿಸಲು 2023-24ನೇ ಸಾಲಿನಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಯಾಗಿರಬೇಕು. 6 ರಿಂದ 10 ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ಉಚಿತ ವಸತಿ, ಉಚಿತ ಊಟ ಶಿಕ್ಷಣ ನೀಡಲಾಗುವುದು.

ಆಸಕ್ತ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ,ಅಟಲ್ ಬಿಹಾರಿ ವಾಜಪೇಯಿ,ಡಾ. ಬಿ.ಆರ್ ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ ಭೇಟಿ ನೀಡಿ ಆನ್‌ಲೈನ್ ಮುಖಾಂತರ ಡಿಸೆಂಬರ್ 07 ರಿಂದ ಡಿಸೆಂಬರ್ 31 ರೂಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗಾಗಿ ಪ್ರಾಂಶುಪಾಲರು ಬಚ್ಚಹಳ್ಳಿ-8105526933, ಪ್ರಾಂಶುಪಾಲರು ಬೊಮ್ಮವಾರ-7349391473, ಪ್ರಾಂಶುಪಾಲರು ಕುಂದಾಣ-9902534050, ಪ್ರಾಂಶುಪಾಲರು ನೆಲಮಂಗಲ-8495812105, ಪ್ರಾಂಶುಪಾಲರು ಕೊಂಡ್ರಹಳ್ಳಿ-9902989639, ಪ್ರಾಂಶುಪಾಲರು ಬಾಲೇಪುರ-9448227951, ಪ್ರಾಂಶುಪಾಲರು ಬೈರಾಪುರ-9916582001, ಪ್ರಾಂಶುಪಾಲರು ಬೈರನಾಯಕನಹಳ್ಳಿ-7259882671, ಪ್ರಾಂಶುಪಾಲರು ಮಾರ್ಡಶ್ವರ-9845308319, ಹಾಗೂ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.217, 2ನೇ ಮಹಡಿ , ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂ.ಗ್ರಾ. ಜಿಲ್ಲೆ-562110. ದೂ.ಸಂ.080-29787447, ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂ.ಸಂ.080-27681784, ದೊಡ್ಡಬಳ್ಳಾಪುರ ತಾಲ್ಲೂಕು ದೂ.ಸಂ. 080-27623681, ಹೊಸಕೋಟೆ ತಾಲ್ಲೂಕು ದೂ.ಸಂ. 080-27931528, ನೆಲಮಂಗಲ ತಾಲ್ಲೂಕು ದೂ.ಸಂ.080-27723172, ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

16 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

21 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago