ಸಮಾಜ ಕಲ್ಯಾಣ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡಲು 2023-24ನೇ ಸಾಲಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಪಿ.ಸಿ.ಎಂ.ಬಿ ಮತ್ತು ಪಿ.ಸಿ.ಎಂ.ಸಿ ಕೋರ್ಸ್‌ಗಳ ದಾಖಲಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ದಿನಾಂಕ: 20-05-2023 ರಂದು ಕೊನೆಯ ದಿನಾಂಕವಾಗಿರುತ್ತದೆ. ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಊಟ ಮತ್ತು ವಸತಿ, ಲೇಖನ ಸಾಮಾಗ್ರಿ, ಪಠ್ಯ ಪುಸ್ತಕ, ಶೂ ಸಾಕ್ಸ್, ಸಮವಸ್ತ್ರ, ಸಿ.ಇ,ಟಿ ಮತ್ತು ನೀಟ್ ಪರೀಕ್ಷೆಗಳಿಗೆ ತರಬೇತಿ ಹಾಗೂ ಇತರೆ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳು:
1) ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು, ಜಡಿಗೇನಹಳ್ಳಿ, ಹೊಸಕೋಟೆ ತಾಲ್ಲೂಕು
2) ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು, ಬಚ್ಚಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು
3) ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಬೊಮ್ಮವಾರ, ದೇವನಹಳ್ಳಿ ತಾಲ್ಲೂಕು.
ಹೆಚ್ಚಿನ ವಿವರಗಳಿಗಾಗಿ ಪ್ರಾಂಶುಪಾಲರುಗಳಾದ ನಾಗರಾಜ್.ಕೆ.ವಿ, -9880322844, ಕಿರಣ್ ಕುಮಾರ್.ಎನ್-9110256424 ಮತ್ತು ನಾಗರತ್ನಮ್ಮ,ಪಿ-8105526933 ಹಾಗೂ ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.217, 2ನೇ ಮಹಡಿ , ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂ.ಗ್ರಾ. ಜಿಲ್ಲೆ-562110. ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…