ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸಭಾಪತಿಗಳಾಗಿ ಆಯ್ಕೆಯಾದ ಬಸವರಾಜ್ ಹೊರಟ್ಟಿ ಅವರಿಗೆ ಶುಭಕೋರಿದ ಸಿಎಂ ಬಸವರಾಜ ಬೊಮ್ಮಾಯಿ.
ಬಸವರಾಜ್ ಹೊರಟ್ಟಿ ಅವರು ಪರಿಷತ್ತಿನ ಅತ್ಯಂತ ಅನುಭವಿ ಮತ್ತು ಹಿರಿಯ ಸದಸ್ಯರಾಗಿರುತ್ತಾರೆ. ಸಭಾಪತಿ ಪೀಠದ ಹಿರಿಮೆ, ಗರಿಮೆಗಳನ್ನು ಎತ್ತಿ ಹಿಡಿಯುವ ಜೊತೆಗೆ ಅತ್ಯಂತ ಸುಗಮವಾದ ರೀತಿಯಲ್ಲಿ ಕಲಾಪವನ್ನು ಮುಂದುವರೆಸಿಕೊಂಡು ಹೋಗುತ್ತಿರೆಂಬ ಅದಮ್ಯ ವಿಶ್ವಾಸ ನಮ್ಮಲ್ಲಿದೆ ಎಂದು ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.