ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧ ನಾಳೆಯಿಂದ ನಿಷೇಧಾಜ್ಞೆ ಜಾರಿ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧಿಸಿದಂತೆ ಫೆಬ್ರವರಿ 16 ರಂದು ಮತದಾನ ನಡೆಯಲಿದ್ದು, ಫೆಬ್ರವರಿ 14 ರ ಸಂಜೆ 4 ಗಂಟೆಯಿಂದ ಫೆಬ್ರವರಿ 16 ರ ಮಧ್ಯರಾತ್ರಿ12 ಗಂಟೆಯ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 6 ಮತದಾನ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಲಿದೆ ಎಂದು ಡಾ.ಎನ್ ಶಿವಶಂಕರ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಇಂದು ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಜೊತೆಗಿನ ಅಂತಿಮ ಸುತ್ತಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ 2024ರ ಸಂಬಂಧ ಫೆಬ್ರವರಿ 16ರಂದು ಜಿಲ್ಲೆಯಲ್ಲಿ ಮತದಾನ ನಡೆಯುವ 6 ಮತದಾನ ಕೇಂದ್ರಗಳ ಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಸಮಯದಲ್ಲಿ ವಿವಿಧ ಆಸೆ ಆಮಿಷಗಳಿಗೆ ಮತದಾರರನ್ನು ಒಳಪಡಿಸುವುದು, ಬೆದರಿಸಲು ಯತ್ನಿಸುವುದು, ತಮ್ಮ ಪರವಾಗಿ ಪ್ರಚಾರ ಮಾಡುವುದು, ಮತಗಟ್ಟೆಗಳ ಹತ್ತಿರದಲ್ಲಿ ಪ್ರಚಾರ ಮಾಡುವುದು, ಸಾರ್ವಜನಿಕ ಸಭೆ ನಡೆಸುವುದು, ಮತದಾರರನ್ನು ವಿವಿಧ ಸಾರಿಗೆ ವ್ಯವಸ್ಥೆಗಳ ಮೂಲಕ ಮತಗಟ್ಟೆಗಳಿಗೆ ಕರೆದುಕೊಂಡು ಬರುವುದು, ಶಾಂತಿಭಂಗ ಉಂಟು ಮಾಡುವುದು, ಅಹಿತಕರ ಘಟನೆಗಳು ನಡೆಯುವಂತೆ ಮಾಡುವ ಸಂಭವನೀಯತೆ ಸೇರಿದಂತೆ ಇತರೆ ಚಟುವಟಿಕೆಗಳನ್ನ ಇದನ್ನು ತಡೆಗಟ್ಟುವ ಹಾಗೂ ಮತದಾನದ ಪವಿತ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ವ್ಯಾಪ್ತಿಯಲ್ಲಿನ 6 ಮತದಾನ ಕೇಂದ್ರಗಳಲ್ಲಿ ನಿಷೇಧಾಜ್ಞೆ ವಿಧಿಸಲಾಗಿದ್ದು ಬಹಿರಂಗ ಪ್ರಚಾರ ಕೊನೆಗೊಳ್ಳಲಿದೆ ಎಂದು ಅವರು ಹೇಳಿದರು.

ಮತದಾನ ನಡೆಯುವ ಸಂದರ್ಭದಲ್ಲಿ ಮತಗಟ್ಟೆ ಸ್ಥಳದಿಂದ 100 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಪೋಲಿಂಗ್ ಏಜೆಂಟ್ಸ್ ಗಳು ಮತದಾನ ದಿನದಂದು ತಪ್ಪದೆ ಬೆಳಗ್ಗೆ 7:00 ಗಂಟೆಗೆ ಹಾಜರಿರಬೇಕು. ಮತದಾರರಿಗೆ ಈಗಾಗಲೇ ಗುರುತಿನ ಚೀಟಿ ವಿತರಿಸಲು ಕ್ರಮ ವಹಿಸಲಾಗುತ್ತಿದೆ, ಮತದಾರರು ಯಾವುದೇ ಪೆನ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ಮತದಾನದ ಸಮಯದಲ್ಲಿ ತರಬಾರದು. ಮತದಾನ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಿ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಮತದಾನ ಸುಸೂತ್ರವಾಗಿ ನಡೆಸಲು ಸನ್ನದ್ಧರಾಗಿದ್ದೇವೆ ಎಂದು ಜಿಲ್ಲಾಧಿಕಾರಿಯವರು ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

8 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

10 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

12 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

17 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

20 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

2 days ago