ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ. ನಾರಾಯಣಗೌಡ) ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಮಾತನಾಡಿ, ರಾಜ್ಯ ಸರ್ಕಾರವು ಎಸ್‌ಎಸ್‌ಎಲ್ ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಹಿಂದೆ ಕರ್ನಾಟಕದಲ್ಲಿ ಹಿಂದಿಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ರಾಜ್ಯಪಾಲರು ತಮ್ಮ ಕಾರ್ಯವ್ಯಾಪ್ತಿಯನ್ನು ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ ಅವರು ಕರ್ನಾಟಕದಲ್ಲಿ ಒಂದೇ ಒಂದು ನಿಮಿಷವೂ ರಾಜ್ಯಪಾಲರಾಗಿ ಉಳಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಗುಡುಗಿದರು.
ರಾಜ್ಯಪಾಲರು ರಾಜ್ಯದ ದಿನನಿತ್ಯದ ಆಡಳಿತದಲ್ಲಿ ಮೂಗು ತೂರಿಸುವುದು ಅತ್ಯಂತ ಆಕ್ಷೇಪಾರ್ಹವಾದ ಬೆಳವಣಿಗೆಯಾಗಿದೆ. ರಾಜ್ಯ ಸರ್ಕಾರವನ್ನು ಕರ್ನಾಟಕದ ಜನತೆ ಆಯ್ಕೆ ಮಾಡಿದ್ದಾರೆ. ನಾಡಿನ ಜನರ ಬೇಕು, ಬೇಡಗಳನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ಹೀಗಿರುವಾಗ ಸರ್ಕಾರದ ಮುಖ್ಯಸ್ತರಾಗಿ ಸರ್ಕಾರದ ನಾಡಪರ ಕಾಳಜಿಯ ನಿರ್ಧಾರಗಳನ್ನು ಬೆಂಬಲಿಸುವುದು ಅವರ ಕರ್ತವ್ಯವಾಗಿರುತ್ತದೆ. ಆದರೆ ಅವರು ಹಿಂದಿ ಮಾಫಿಯಾ ಪರವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ತೋರುತ್ತದೆ. ಹೀಗಾಗಿ ಅವರನ್ನು ಕೇಂದ್ರ ಸರ್ಕಾರ ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸುತ್ತೇವೆ ಎಂದರು.
ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘ ಎಂಬ ಅನಾಮಧೇಯ ಸಂಘಟನೆಯ ಮನವಿಗೆ ತುರ್ತಾಗಿ ರಾಜ್ಯಪಾಲರು ಪ್ರತಿಕ್ರಿಯಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದೇ ಒಂದು ದೊಡ್ಡ ಹುನ್ನಾರವಾಗಿದೆ. ಕರ್ನಾಟಕವನ್ನು ವಲಸೆ ಬರುತ್ತಿರುವ ಹಿಂದಿಭಾಷಿಕರಿಗಾಗಿ ಸುರಕ್ಷಿತ ಸ್ವರ್ಗವನ್ನಾಗಿಸುವ ದೂರಗಾಮಿ ಉದ್ದೇಶಗಳು ಹಿಂದಿ ಮಾಫಿಯಾಗೆ ಇದೆ. ಅದರ ಭಾಗವಾಗಿಯೇ ರಾಜ್ಯಪಾಲರು ಈ ಪತ್ರ ಬರೆದಿದ್ದಾರೆ ಎಂಬುದು ಸ್ಪಷ್ಟ. ಕರ್ನಾಟಕದ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ರಾಜ್ಯ ಸರ್ಕಾರವನ್ನು ಇದಕ್ಕಾಗಿಯೇ ನಾವು ಆಯ್ಕೆ ಮಾಡಿ ಕಳಿಸಿದ್ದೇವೆ. ಇದನ್ನು ಪ್ರಶ್ನಿಸಲು ರಾಜ್ಯಪಾಲರು ಯಾರು? ಅವರಿಗೆ ಸಂವಿಧಾನ ಈ ಅವಕಾಶ ನೀಡಿಲ್ಲ. ಹಿಂದಿ ಮಾಫಿಯಾ ಎಷ್ಟು ಬಲಶಾಲಿಯಾಗಿದೆ ಎಂಬುದು ಇದರಿಂದ ಗೊತ್ತಾಗುತ್ತಿದೆ. ಹುತ್ತದ ಒಳಗೆ ಇನ್ನಷ್ಟು ಹಾವುಗಳು ಇವೆಯೋ ಗೊತ್ತಿಲ್ಲ. ಎಲ್ಲವೂ ಹೊರಬರಲಿ ಎಂದು ನಾವು ಕಾಯುತ್ತಿದ್ದೇವೆ ಎಂದು ಆಗ್ರಹಿಸಿದರು.
ರಾಜ್ಯಪಾಲರ ಈ ಪತ್ರವನ್ನು ರಾಜ್ಯ ಸರ್ಕಾರ ಕಸದ ಬುಟ್ಟಿಗೆ ಎಸೆಯಬೇಕು. ಕನ್ನಡಿಗರ ಹಿತದೃಷ್ಟಿಗೆ ವಿರುದ್ಧವಾಗಿ ಯಾರೇ ಏನೇ ಹೇಳಿದರೂ ಅದನ್ನು ರಾಜ್ಯ ಸರ್ಕಾರ ಪರಿಗಣಿಸಬೇಕಿಲ್ಲ. ನಾವು ಹಿಂದೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಹೋರಾಡಿದ್ದೆವು. ಈಗ ಹಿಂದಿ ಸಾಮ್ರಾಜ್ಯಶಾಹಿ ನಮ್ಮನ್ನು ಆಳಲು ಯತ್ನಿಸುತ್ತಿದೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ. ನಮ್ಮ ಪ್ರಾಣ ಹೋದರೂ ನಮ್ಮ ನೆಲದ ಅಸ್ಮಿತೆಯನ್ನು ಉಳಿಸಿಕೊಳ್ಳುತ್ತೇವೆ ಎಂದು ಎಚ್ಚರಿಸಿದರು..
ತೃತೀಯ ಭಾಷೆ ಗ್ರೇಡಿಂಗ್ ವ್ಯವಸ್ಥೆಯ ನಿರ್ಧಾರ ಸರ್ಕಾರ ಕೈಗೊಂಡಿದೆ. ಇದನ್ನು ಬದಲಿಸುವ ಪ್ರಯತ್ನ ಯಾರೇ ಮಾಡಿದರೂ ರಕ್ತಕ್ರಾಂತಿಯಾಗುತ್ತದೆ. ರಾಜ್ಯಪಾಲ ಗೆಹ್ಲೋಟ್ ಹಿಂದಿ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಲ್ಲೆಲ್ಲಾ ತೃತೀಯ ಭಾಷೆಯಾಗಿ ಕನ್ನಡ ಕಲಿಸಲು ತಾಕೀತು ಮಾಡಲಿ. ಅಷ್ಟೇಕೆ ಅವರ ಸ್ವಂತ ರಾಜ್ಯವಾದ ಮಧ್ಯಪ್ರದೇಶದಲ್ಲಿ ಈಗಲೂ ಎರಡೇ ಭಾಷೆಗಳನ್ನು ಕಲಿಸಲಾಗುತ್ತಿದೆ. ಮೂರನೇ ಭಾಷೆಯನ್ನಾಗಿ ಕಡ್ಡಾಯವಾಗಿ ಕನ್ನಡ ಕಲಿಸುವಂತೆ ಅಲ್ಲಿನ ಸರ್ಕಾರದ ಮೇಲೆ ಅವರು ಒತ್ತಡ ಹೇರಲಿ. ಅದು ಸಾಧ್ಯವಿಲ್ಲದಿದ್ದರೆ ಕನ್ನಡಿಗರ ಮೇಲೆ ಯಾಕೆ ಹಿಂದಿ ಹೇರಲು ಯತ್ನಿಸುತ್ತಾರೆ. ಇಂಥ ನಾಡದ್ರೋಹಿ ರಾಜ್ಯಪಾಲ ಕರ್ನಾಟಕದಲ್ಲಿ ಇರಲು ಯೋಗ್ಯರಲ್ಲ. ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಲಿ ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಡಾ.ಕೆ ಅನುರಾಧಾ ಅವರಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ಕೇಂದ್ರಕ್ಕೆ ಮನವಿ ಮಾಡಿದರು.
ಈ ವೇಳೆ ಕರವೇ ಜಿಲ್ಲಾ ಉಪಾಧ್ಯಕ್ಷ ಉಪಾಧ್ಯಕ್ಷ ಸೇರಿದಂತೆ ಅನೇಕರು ಇದ್ದರು..
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…
DRI (Directorate of Revenue Intelligence) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 5 ಜನ ಆರೋಪಿಗಳ ಬಂಧನ ಮಾಡಿ ಬಂಧಿತರಿಂದ…
ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬಗೆದೊಷ್ಟು ಬಯಲಾಗುತ್ತಿದೆ ಭ್ರಷ್ಟ…
ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…