
ಕರ್ನಾಟಕ ಸೇರಿದಂತೆ 5 ರಾಜ್ಯಗಳ ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಮೇ ತಿಂಗಳಲ್ಲಿ ಈ ನೇಮಕಾತಿಗಳನ್ನು ಶಿಫಾರಸು ಮಾಡಿತ್ತು. ಅದರಂತೆ, ನ್ಯಾಯಮೂರ್ತಿಗಳ ನೇಮಕ ನಡೆದಿದೆ.
ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ವಿಭು ಬಕ್ರು ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದ ನ್ಯಾಯಮೂರ್ತಿ ಸಂಜೀವ್ ಸಚ್‌ದೇವ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಪಾಟ್ನಾ ಹೈಕೋರ್ಟ್‌ನ ನ್ಯಾಯಮೂರ್ತಿ ಅಶುತೋಷ್ ಕುಮಾರ್ ಅವರನ್ನು ಗೌಹಾಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಪಾಟ್ನಾ ಹೈಕೋರ್ಟ್‌ನ ನ್ಯಾಯಮೂರ್ತಿ ವಿಪುಲ್ ಮನುಭಾಯಿ ಪಾಂಚೋಲಿ ಅವರನ್ನು ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಹಿಮಾಚಲ ಪ್ರದೇಶ ಹೈಕೋರ್ಟ್‌ನ ನ್ಯಾಯಮೂರ್ತಿ ತರ್ಲೋಕ್ ಸಿಂಗ್ ಚೌಹಾಣ್ ಅವರನ್ನು ಜಾರ್ಖಂಡ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.