ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಶುಶ್ರೂಷಕಿಯರ (ನರ್ಸ್) ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಲಾಗಿತ್ತು.
ನವಜಾತ ಶಿಶುವನ್ನು ಅಪಹರಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ರವರ ಮಾರ್ಗದರ್ಶನದಲ್ಲಿ 24 ಗಂಟೆಗಳಲ್ಲಿ ತ್ವರಿತ ಕಾರ್ಯಚರಣೆ ಕೈಗೊಂಡು ಮಗುವನ್ನು ಸಂರಕ್ಷಿಸಿ ಪಾಲಕರಿಗೆ ಒಪ್ಪಿಸಲಾಗಿದೆ.
ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಶಿಶುವನ್ನು ಅಪಹರಿಸಲಾಗಿತ್ತು. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ವಿವರ
ಕಸ್ತೂರಿ ಎಂಬವರು ಸೋಮವಾರ (ನ. 25) ನಸುಕಿನ ಜಾವ 4 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಸಂಜೆ ನರ್ಸ್ ವೇಷದಲ್ಲಿ ಸಂಪೂರ್ಣ ಮುಖ ಮುಚ್ಚಿಕೊಂಡು ಬಂದಿದ್ದ ಇಬ್ಬರು ಮಹಿಳೆಯರು ರಕ್ತ ತಪಾಸಣೆ ಮಾಡಬೇಕು ಮಗು ಕರೆದುಕೊಂಡು ಬನ್ನಿ ಎಂದು ಹೇಳಿದ್ದರು. ಹೀಗಾಗಿ, ಕಸ್ತೂರಿ ಅವರ ಸಂಬಂಧಿ ರಕ್ತ ತಪಾಸಣೆಗಾಗಿ ಮಗುವನ್ನು ತೆಗೆದುಕೊಂಡು ಹೋಗಿದ್ದರು. ಈ ವೇಳೆ ಮಹಿಳೆಯರು ಮಗುವನ್ನು ನಮಗೆ ಕೊಡಿ ಎಂದಿದ್ದರು. ನಂತರ, ಮಗುವನ್ನು ಎತ್ತಿಕೊಂಡು ಅಲ್ಲಿಂದ ಪರಾರಿಯಾಗಿದ್ದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…