Categories: ಟಿವಿ

ಕಲರ್ಸ್ ಕನ್ನಡದಲ್ಲಿ ಸೆಪ್ಟೆಂಬರ್ 9ರಿಂದ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’ ಆರಂಭ: ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ

ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ 6:30ಕ್ಕೆ ಈ ಧಾರಾವಾಹಿ ಪ್ರಸಾರವಾಗಲಿದೆ.

ಜನಪ್ರಿಯ ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ.

ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ನಿಮ್ಮ ಮನಸೂರೆಗೊಳ್ಳಲು ಕಾದಿದ್ದಾರೆ.

‘ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ’ ಎನ್ನುತ್ತಾರೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಿರುವುದು ‘ದೃಷ್ಟಿ ಬೊಟ್ಟು’ ಧಾರಾವಾಹಿಯ ಮತ್ತೊಂದು ಹೆಗ್ಗಳಿಕೆ.

ಈ ಧಾರಾವಾಹಿಯ ಸ್ಪೆಷಲ್ ಪಾರ್ಟನರ್ ಸ್ಪರ್ಶ್ ಮಸಾಲಾ. ಎರಡು ವಿಭಿನ್ನ ಕೌಟುಂಬಿಕ ಹಿನ್ನೆಲೆಗಳಿಂದ ಬಂದ ದೃಷ್ಟಿ ಎಂಬ ಹುಡುಗಿ ಹಾಗೂ ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಸಂಧಿಸಿದಾಗ ನಡೆಯುವ ಕುತೂಹಲಕರ ಕಥಾನಕವನ್ನು ‘ದೃಷ್ಟಿಬೊಟ್ಟು’ ಎಳೆಎಳೆಯಾಗಿ ಅನಾವರಣಗೊಳಿಸುತ್ತಾ ಹೋಗುತ್ತದೆ.

ದೃಷ್ಟಿಯ ಪಾಲಿಗೆ ರೂಪ ಅನ್ನುವುದೇ ಶಾಪ. ತನ್ನ ರೂಪವನ್ನೇ ಬದಲಾಯಿಸಿಕೊಂಡು ಬದುಕುತ್ತಿರುವ ಅವಳಿಗೆ ತನ್ನ ಸೋದರಿಯನ್ನು ಮರಳಿ ಮನೆಗೆ ಕರೆತಂದು ಕುಟುಂಬವನ್ನು ಒಂದು ಮಾಡಬೇಕೆಂಬ ಗುರಿ. ಮೊದಲು ಮೆಕಾನಿಕ್ ಆಗಿ ಈಗ ರೌಡಿಯಾಗಿರುವ ಕಥಾನಾಯಕ ದತ್ತ, ಸುಂದರವಾಗಿರುವ ಹೆಣ್ಣುಗಳನ್ನ ಕಂಡರೆ ಉರಿದು ಬೀಳುತ್ತಾನೆ. ದುರುಳ ಪೋಲೀಸನೊಬ್ಬನ ಕೈಗೆ ಸಿಕ್ಕ ದೃಷ್ಟಿ ಅವನ ಕಿರುಕುಳಕ್ಕೆ ಸಿಕ್ಕು ಒದ್ದಾಡುತ್ತಿರುವಾಗ ದತ್ತನ ಪ್ರವೇಶವಾಗುತ್ತದೆ. ಆಮೇಲೆ ಕತೆ ಹಲವು ಊಹಿಸಲಾಗದ ತಿರುವುಗಳನ್ನು ತೆಗೆದುಕೊಳ‌್ಳುತ್ತಾ ಮುಂದೆ ಸಾಗುತ್ತದೆ.

ದೃಷ್ಟಿಗೆ ತನ್ನ ಸೋದರಿ ಸಿಕ್ಕಳೆ? ವಿಧಿ ದತ್ತ ಮತ್ತು ದೃಷ್ಟಿಯನ್ನು ಒಂದುಮಾಡುವುದೆ? ದತ್ತನನ್ನು ಅವನ ದುಷ್ಟ ಸೋದರಿಯರಿಂದ ದೃಷ್ಟಿ ಕಾಪಾಡಬಲ್ಲಳೆ? ಇಂಥ ಎಲ್ಲ ಪ್ರಶ್ನೆಗಳಿಗೂ ಉತ್ತರ ಬೇಕೆಂದರೆ ನೀವು ‘ದೃಷ್ಟಿಬೊಟ್ಟು’ ಧಾರಾವಾಹಿಯನ್ನು ನೋಡಬೇಕು.

ಅಂದರೆ ಸೆಪ್ಟೆಂಬರ್ 9ರ ಸಂಜೆ 6:30ಕ್ಕೆ ತಪ್ಪದೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಮೊದಲ ಸಂಚಿಕೆಯನ್ನು ವೀಕ್ಷಿಸಬೇಕು. ಬಳಿಕ ಜಿಯೊ ಸಿನಿಮಾ ಆಪ್ ನಲ್ಲಿ ಕೂಡ ‘ದೃಷ್ಟಿಬೊಟ್ಟು’ ಧಾರಾವಾಹಿಯನ್ನು ನೀವು ವೀಕ್ಷಿಸಬಹುದು.

Ramesh Babu

Journalist

Share
Published by
Ramesh Babu

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

3 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

10 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

13 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

14 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago