ಕಲಾವಿದರ ಮಾಸಾಶನಕ್ಕೆ ಅರ್ಜಿ ಅಹ್ವಾನ

ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಖೇನ ನಾಡು -ನುಡಿಯ ಸೇವೆಗೆ ಸಂಬಂಧಿಸಿದಂತೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಪ್ರತಿ ತಿಂಗಳು ರೂ.2,000/- ಗಳ ಮಾಸಾಶನವನ್ನು ನೀಡುವ ಯೋಜನೆಯನ್ನು ಈ ಹಿಂದೆ ಜಾರಿಗೆ ತಂದಿರುತ್ತದೆ. ಈ ಯೋಜನೆಗೆ ವರ್ಷಪೂರ್ತಿ ಅರ್ಜಿ ಸಲ್ಲಿಸಲು ಅವಕಾಶಗಳಿದ್ದು, ಅರ್ಹರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿದಾರರಿಗೆ 58 ವರ್ಷ ಪೂರ್ಣಗೊಂಡಿರಬೇಕು, ಅರ್ಜಿದಾರರು 25 ವರ್ಷಗಳ ಕಾಲ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರಬೇಕು, ಅರ್ಜಿದಾರರು ಸರ್ಕಾರದ ಯಾವುದೇ ಇತರೇ ಇಲಾಖೆಯ ಯೋಜನೆಗಳ ಫಲಾನುಭವಿಗಳಾಗಿರಬಾರದು, ಅರ್ಜಿದಾರರ ವಾರ್ಷಿಕ ಆದಾಯ ರೂ.1.00 ಲಕ್ಷದ ಮಿತಿಯಲ್ಲಿರಬೇಕು.

ಅಸಕ್ತ ಅರ್ಹ ಕಲಾವಿದರು, ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೇ ನೇರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ ಇಲ್ಲಿಗೆ ಭೇಟಿ ನೀಡಿ ಅರ್ಜಿ / ಮಾಹಿತಿಯನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಯ ದೂರವಾಣಿ ಸಂಖ್ಯೆ: 080-29560059 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

7 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

8 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

20 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

20 hours ago