ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಅಂತಾರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರಿಗೆ 12 ನೇ ವಿಶ್ವ ಕನ್ನಡ ಅಕ್ಕ ಸಮ್ಮೇಳನದಲ್ಲಿ ವಿಶ್ವ ಮಾನ್ಯ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವಿಶ್ವದ ಬಹುದೊಡ್ಡ ಕನ್ನಡ ಸಮ್ಮೇಳನವು ಇದಾಗಿದ್ದು, ಅಮೆರಿಕ ದೇಶದ ವರ್ಜೀನಿಯಾ ರಾಜ್ಯದ ರಿಚ್‌ಮಂಡ್ ನಗರದಲ್ಲಿ ಆಗಸ್ಟ್ 30, 31 ಹಾಗೂ ಸೆ 1ರಂದು ಮೂರು ದಿನಗಳು ನಡೆದಿದ್ದು ನೂರಾರು ಕಲಾವಿದರು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು ಜಿಲ್ಲೆಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರ ಜಾನಪದ ಕಲೆ ಉಳಿವಿಗಾಗಿ ಮತ್ತು ಕನ್ನಡ ನಾಡು ನುಡಿಗಾಗಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಸಮ್ಮೇಳನದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಎಂಎಲ್ಸಿ ನಾಗರಾಜ್ ಯಾದವ್ ಮಾಜಿ ಸಚಿವೆ ರಾಣಿ ಸತೀಶ್, ಯೋಗಗುರು ವಚನಾನಂದ ಸ್ವಾಮೀಜಿ, ಅಕ್ಕ ಸಮ್ಮೇಳನದ ಅಧ್ಯಕ್ಷ ರವಿಬೋರೇಗೌಡ,ಮುಖಂಡರಾದ ಸಾಗರ್, ಕಿಕ್ಕೇರಿ ಕೃಷ್ಣಮೂರ್ತಿ, ಅಕ್ಕ ಸಂಸ್ಥಾಪಕ ಅಮರನಾಥಗೌಡ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…