Categories: ಕೋಲಾರ

ಕಲಾವಿದ ಗೋ.ನಾ ಸ್ವಾಮಿಗೆ ಅಕ್ಕ ಸಮ್ಮೇಳನದಲ್ಲಿ ವಿಶ್ವ ಮಾನ್ಯ ಕನ್ನಡಿಗ ಪ್ರಶಸ್ತಿ ಪ್ರದಾನ

ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಅಂತಾರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರಿಗೆ 12 ನೇ ವಿಶ್ವ ಕನ್ನಡ ಅಕ್ಕ ಸಮ್ಮೇಳನದಲ್ಲಿ ವಿಶ್ವ ಮಾನ್ಯ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿಶ್ವದ ಬಹುದೊಡ್ಡ ಕನ್ನಡ ಸಮ್ಮೇಳನವು ಇದಾಗಿದ್ದು, ಅಮೆರಿಕ ದೇಶದ ವರ್ಜೀನಿಯಾ ರಾಜ್ಯದ ರಿಚ್‌ಮಂಡ್‌ ನಗರದಲ್ಲಿ ಆಗಸ್ಟ್ 30, 31 ಹಾಗೂ ಸೆ 1ರಂದು ಮೂರು ದಿನಗಳು ನಡೆದಿದ್ದು ನೂರಾರು ಕಲಾವಿದರು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು ಜಿಲ್ಲೆಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರ ಜಾನಪದ ಕಲೆ ಉಳಿವಿಗಾಗಿ ಮತ್ತು ಕನ್ನಡ ನಾಡು ನುಡಿಗಾಗಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಸಮ್ಮೇಳನದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಎಂಎಲ್ಸಿ ನಾಗರಾಜ್ ಯಾದವ್ ಮಾಜಿ ಸಚಿವೆ ರಾಣಿ ಸತೀಶ್, ಯೋಗಗುರು ವಚನಾನಂದ ಸ್ವಾಮೀಜಿ, ಅಕ್ಕ ಸಮ್ಮೇಳನದ ಅಧ್ಯಕ್ಷ ರವಿಬೋರೇಗೌಡ,ಮುಖಂಡರಾದ ಸಾಗರ್, ಕಿಕ್ಕೇರಿ ಕೃಷ್ಣಮೂರ್ತಿ, ಅಕ್ಕ ಸಂಸ್ಥಾಪಕ ಅಮರನಾಥಗೌಡ ಮುಂತಾದವರು ಇದ್ದರು.

Ramesh Babu

Journalist

Recent Posts

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

44 minutes ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

3 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

16 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

18 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

21 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

24 hours ago